
ಸಕಲೇಶಪುರ : ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಬೆಳಗೋಡು ಗ್ರಾಮ ಪಂಚಾಯಿತಿ ವತಿಯಿಂದ 100 ಅಡಿ ತ್ರಿವರ್ಣ ಧ್ವಜವನ್ನು ಬೆಳಗೋಡು ಅಂಬೇಡ್ಕರ್ ಸಮುದಾಯ ಭವನದಿಂದ ಬೆಳಗೋಡು ವೃತ್ತದವರೆಗೂ ಶಾಲೆಯ ಮಕ್ಕಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರುಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು,ಶಿಕ್ಷಕರು ಮುಖಂಡರು ಶಾಲೆ ಮಕ್ಕಳ ಬ್ಯಾಂಡ್ ಸೆಟ್ ಗೋಷ್ಠಿ ಯೊಂದಿಗೆ ಬೆಳಗೋಡು ಪಟ್ಟಣದ ರಾಜ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಗ್ರಾಮದ ಹಿರಿಯ ಮುಖಂಡರು ಮೆರವಣಿಗೆಯಲ್ಲಿ ಭಾಗಿಯಾಗಿ ಈ ಸ್ವತಂತ್ರೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೆ ನೆರವೇರಿಸಿದರು.


