
ಸಕಲೇಶಪುರ : ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಉತ್ಪಾದನೆ, ಮಾರಾಟಕ್ಕೆ ನಿಷೇಧಿಸಲಾಗಿದೆ ಎಂದುಸಕಲೇಶಪುರ ಪುರಸಭೆ ಮುಖ್ಯ ಅಧಿಕಾರಿ ಮಹೇಶ್ವರ್ ತಿಳಿಸಿದ್ದಾರೆ:
ಹಾಸನ ಜಿಲ್ಲೆಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಹಾಗೂ ವಿಸರ್ಜನೆಗೆ ಸಂಪೂರ್ಣ ನಿಷೇಧ ಜಾರಿಯಾಗಿದೆ.
ಹಾಸನ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಪರಿಸರ ಮಾಲಿನ್ಯ ತಡೆಯಲು ಹಾಗೂ ಜಲಮೂಲಗಳ ಸಂರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.ಸಕಲೇಶಪುರ ಪಟ್ಟಣ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.
ಪುರಸಭೆ ಮುಖ್ಯ ಅಧಿಕಾರಿ ಮಹೇಶ್ವರ್ ಅವರು, “ಜಿಲ್ಲಾಡಳಿತ ನೀಡಿರುವ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತೇವೆ. ಸಾರ್ವಜನಿಕರು ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಮಾತ್ರ ಬಳಸಿ ಸಹಕರಿಸಬೇಕು” ಎಂದು ತಿಳಿಸಿದ್ದಾರೆ.
