ಹಾಸನ : ರ್ಪೋಷಕರ,ಗ್ರಾಮಸ್ಥರ,ಗ್ರಾಮದ ಮುಖಂಡರ,ಮತ್ತು ದಾನಿಗಳ ಮನವೊಲಿ ಗೈಡ್ಸ್ಸಿ ಪ್ರತಿ ವರ್ಷ ಶಾಲಾ ದಾಖಲಾತಿ ಹೆಚ್ಚಿಸಿ ಗ್ರಾಮೀಣ ಶಾಲೆಯನ್ನು ಅಭಿವೃದ್ಧಿ ಪಡಿಸಿ ಸುಂದರ ಪರಿಸರದಲ್ಲಿ ಮಾದರಿ ಶಾಲೆಯಾಗಿ ನಿರ್ಮಾಣ ಮಾಡಿದ ಪ್ರಭಾರ ಮುಖ್ಯ ಶಿಕ್ಷಕರಾದ ಜಿ.ಆರ್,ಸತೀಶ್ ರವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇವರು ಹೆತ್ತೂರು ಹೋಬಳಿ ಗುಂಡಿಗೆರಿ ಗ್ರಾಮದ ರೈತ ಕುಟುಂಬದ ಮಗನಾಗಿ ಗ್ರಾಮೀಣ ಪ್ರದೇಶದಲ್ಲಿ ಪ್ರಾಥಮಿಕ,ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಮುಗಿಸಿ, ಮಡಿಕೇರಿಯಲ್ಲಿ ಶಿಕ್ಷಕರ ತರಬೇತಿ ಪಡೆದ ನಂತರ 1996ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಆಲೂರು ತಾಲ್ಲೂಕು ಕೆಂಚಮ್ಮಹೊಸಕೊಟೆ ಹೋಬಳಿ ಹಂಜಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವೃತ್ತಿ ಜೀವನ ಪ್ರಾರಂಭಿಸಿ, ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಹಾಡ್ಯಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಜಿ.ಆರ್.ಸತೀಶ್ ಅವರು ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಿ,

ದಾನಿಗಳ ಸಹಾಯದಿಂದ ಶಾಲೆಯ ಎಲ್ಲಾ ಕೊಠಡಿಗಳಿಗೆ ಟೈಲ್ಸ್ ವ್ಯವಸ್ಥೆ,ವಿದ್ಯಾರ್ಥಿಗಳು ತರಗತಿಯಲ್ಲಿ ಕೂರಲು ಡೆಸ್ಕ್ ಮತ್ತು ಬೆಂಚ್ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ನಲಿ-ಕಲಿ ಟೇಬಲ್, ಶಾಲೆಗೆ ಗಾಡ್ರೇಜ್, ಛೇರ್ ಗಳು ,ವಿದ್ಯಾರ್ಥಿಗಳಿಗೆ ಆಟದ ಸಾಮಾನುಗಳಾದ ಜೋಕಾಲಿ,ಜಾರುವ ಬಂಡಿ,ವಾಲಿಬಾಲ್,ಥ್ರೋ ಬಾಲ್,ಸೆಟಲ್ ಬ್ಯಾಟ್, ರಿಂಗ್ ಗಳನ್ನು ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಒದಗಿಸಲಾಗಿದೆ, ಶಾಲೆಗೆ ಸುಣ್ಣ ಬಣ್ಣ ಮಾಡಿಸಿ ವಿದ್ಯಾರ್ಥಿಗಳ ಕಲಿಕೆಗೆ ಸುಂದರ ಪರಿಸರಗೊಳಿಸಿರುವ ಉತ್ತಮ ಶಿಕ್ಷಕರಾದ ಜಿ.ಆರ್.ಸತೀಶ್ ರವರು ಸುಮಾರು 28 ವರ್ಷಗಳ ಕಾಲ ನೀಡಿರುವ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ,ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ,ಹಾಸನ, ಹಾಸನಾಂಬ ಕಲಾಕ್ಷೇತ್ರದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಆಯೋಜನೆಯಲ್ಲಿ, ಶ್ರೀಯುತರಾದ ಜಿ.ಆರ್. ಸತೀಶ್ ರವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಹೆತ್ತೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹೆಚ್.ಪಿ.ರವಿಕುಮಾರ್, ಶಾಲಾಭಿವೃದ್ಧಿ ಸಮಿತಿ ಹಾಡ್ಯ, ಗ್ರಾಮಸ್ಥರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *