ಹಾಸನ : ಇತ್ತೀಚೆಗೆ ಆಸ್ಪತ್ರೆ ಎಂದರೆ ಅವ್ಯವಸ್ಥೆಯ ಬಗ್ಗೆ ಮಹಿಳಾ ಪತ್ರಕರ್ತ ಕೇಳಿದ ಪ್ರಶ್ನೆಗೆ ಉಡಾಫೆ ಉತ್ತರ ನೀಡಿದ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ಅವರು ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ ಎಂದು ಮಹಿಳಾ ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಉಡಾಫೆಯಿಂದ ಉತ್ತರಕೊಟ್ಟ ಶಾಸಕ ಆರ್ ವಿ ದೇಶಪಾಂಡೆ ವಿರುದ್ಧ ಹಾಸನ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶಪಾಂಡೆಯವರ ಹೇಳಿಕೆಗೆ ವಿರೋಧ ಪಕ್ಷಗಳು ಮತ್ತು ಪತ್ರಕರ್ತರ ಸಂಘಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿ ದೇಶಪಾಂಡೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಉತ್ತರ ಕನ್ನಡ ಜಿಲ್ಲೆಯ ಆಸ್ಪತ್ರೆ ಸಮಸ್ಯೆ ಕುರಿತು ಪ್ರಶ್ನೆ ಕೇಳಿದ ಮಹಿಳಾ ಪತ್ರಕರ್ತೆಗೆ ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವುದಾಗಿ ಉಡಾಫೆಯ ಉತ್ತರವನ್ನು ಕಾಂಗ್ರೆಸ್‌ನ ಹಿರಿಯ ನಾಯಕ, ಶಾಸಕರಾದ ಆರ್‌. ವಿ. ದೇಶಪಾಂಡೆ ನೀಡಿದ್ದಾರೆ.

ಶಾಸಕರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರ ವಿಚಾರದಲ್ಲಿ ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆ ವ್ಯಕ್ತವಾಗುತ್ತಿದೆ.

ಸಮಸ್ಯೆ ಹೇಳಿಕೊಂಡು ಬರುವ ಮಹಿಳೆಯರ ದುಪಟ್ಟಾ ಎಳೆಯುವ ಮುಖ್ಯಮಂತ್ರಿ ಒಂದೆಡೆಯಾದರೆ, ಸಮಸ್ಯೆ ಕುರಿತು ಪ್ರಶ್ನಿಸುವ ಮಹಿಳಾ ಪತ್ರಕರ್ತರಿಗೆ ಉಡಾಫೆಯ ಉತ್ತರ ನೀಡುವ ಕೈ ಶಾಸಕರು.

ಮತ್ತೊಂದೆಡೆ ರಾಜ್ಯದಲ್ಲಿ ಮೂಲಭೂತ ಅವಶ್ಯಕತೆಗಳನ್ನು ಕೇಳೋದು ತಪ್ಪಾ? ಅಸಭ್ಯವಾಗಿ ಉತ್ತರ ನೀಡಿದ ಕಾಂಗ್ರೆಸ್ ಶಾಸಕರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *