ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ವಿಷ್ಣುವರ್ಧನ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿನ ಕೊಡುಗೆ ಪರಿಗಣಿಸಿ ಕರ್ನಾಟಕ ರತ್ನ ಪುರಸ್ಕಾರ ನೀಡಬೇಕೆಂದು ಅವರ ಪತ್ನಿ ಭಾರತೀ ವಿಷ್ಣುವರ್ಧನ್ , ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಜೊತೆಗೆ ನಟಿಯರಾದ ತಾರಾ, ಶೃತಿ, ಮಾಳವಿಕಾ ಅವಿನಾಶ್ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾಗಿ ಕರ್ನಾಟಕ ರತ್ನ ಪುರಸ್ಕಾರ ನೀಡಲು ಮನವಿ ಮಾಡಿದ್ದರು.

ಇದರ ಬಗ್ಗೆ ಇಂದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಒಪ್ಪಿಗೆ ನೀಡಲಾಗಿದೆ.ಈ ಹಿಂದೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪುರಸ್ಕಾರ ನೀಡಲಾಗಿತ್ತು.

ಈಗ ಮರಣೋತ್ತರವಾಗಿ ಸಾಹಸ ಸಿಂಹ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *