
ಸಕಲೇಶಪುರ : ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಮಾಜಕ್ಕೆ ಹೆಮ್ಮೆಯ ಸಂಗತಿ. 12ನೇ ಶತಮಾನದಲ್ಲಿ ಸಮಾನತೆಯ ಸಂದೇಶ ನೀಡಿ ‘ಕಾಯಕವೇ ಕೈಲಾಸ’ ಎಂಬ ತತ್ವವನ್ನು ಬೋಧಿಸಿದ ಬಸವೇಶ್ವರರ ಆದರ್ಶಗಳನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸಲು ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸೆಪ್ಟೆಂಬರ್ 21, ಭಾನುವಾರ ಹಾಸನಾಂಬ ಕಲಾಕ್ಷೇತ್ರದಲ್ಲಿ ದಿನವಿಡೀ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಬಸವಣ್ಣನವರ ರಥಯಾತ್ರೆಗೆ ಸ್ವಾಗತ, ಬೆಳಿಗ್ಗೆ 11 ಗಂಟೆಗೆ ವಿದ್ಯಾರ್ಥಿಗಳ ಜೊತೆ ಸಂವಾದ, ಮಧ್ಯಾಹ್ನ 4 ಗಂಟೆಗೆ ಸದ್ಭಾವನಾ ಪಾದಯಾತ್ರೆ ಮತ್ತು ರಥ ಮೆರವಣಿಗೆ, ಸಂಜೆ 5 ಗಂಟೆಗೆ ವೇದಿಕೆ ಕಾರ್ಯಕ್ರಮ ಹಾಗೂ ರಾತ್ರಿ 8 ಗಂಟೆಗೆ “ಜಂಗಮದೆಡೆಗೆ ಎಂಬ” ನಾಟಕ ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.ನಾಡಿನ ಪ್ರಮುಖ ಸ್ವಾಮೀಜಿಗಳು, ಬಸವೇಶ್ವರರ ಅಭಿಮಾನಿಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಎಲ್ಲಾ ಸಮಾಜದ ಬಾಂಧವರಿಗೆ ಸ್ವಾಮೀಜಿಗಳು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಕಲಾಪುರ ಮಠದ ಸ್ವಾಮೀಜಿ, ಧರ್ಮೇಂದ್ರ ಮಹಾಸ್ವಾಮೀಜಿ, ಕಣ್ಣೀರುಹಳ್ಳ ಮಠದ ವಿಜಯೇಂದ್ರ ಸ್ವಾಮೀಜಿ, ಮಾಜಿ ಶಾಸಕ ಹೆಚ್ ಎಂ ವಿಶ್ವನಾಥ್, ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಪರಮೇಶ್, ಕಟ್ಟಾಯ ಶಿವಕುಮಾರ್, ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಮೂಗಲಿ ಧರ್ಮಪ್ಪ ಕಾರ್ಯದರ್ಶಿ ಯೆಡೆಹಳ್ಳಿ ಆರ್ ಮಂಜುನಾಥ್, ವಿದ್ಯಾಶಂಕರ್ ,ಗುರುವೇ ಗೌಡ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಡಿ. ಬಸವಣ್ಣ, ಅಕ್ಕಮಹಾದೇವಿ ಮಹಿಳಾ ಅಧ್ಯಕ್ಷೆ ಕೋಮಲ ದಿನೇಶ್, ವಿಜಯ್ ಕುಮಾರ್, ವಿಶ್ವಕರ್ಮ ಸಮಾಜದ ಅಧ್ಯಕ್ಷ ಶ್ರೀನಿವಾಸ್, ನರೇಶ್, ಹೆಚ್ ಹೆಚ್ ಉದಯ್ ಇತರರು ಇದ್ದರು.
