
ಚನ್ನರಾಯಪಟ್ಟಣ : ಮದ್ಯದ ನಶೆಯಲ್ಲಿ ಪತ್ನಿಗೆ ಚಾಕು ಇರಿದ ಪಾಪಿ ಪತಿಮಧ್ಯದ ನಶೆಯಲ್ಲಿ ಪತ್ನಿಗೆಚಾಕು ಇರಿದು ಹತ್ಯೆ ಮಾಡಿದ ಘಟನೆ ಚನ್ನರಾಯಪಟ್ಟಣಲ್ಲಿ ನಡೆದಿದೆ
ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ ಇದಾಗಿದ್ದು ಗೃಹಿಣಿ ರೇಖಾ (38) ಅವರನ್ನು ಅವರ ಗಂಡ ರಘು (40) ಚಾಕು ವಿನಿಂದ ಇರಿದು ಹತ್ಯೆಗೈದಿದ್ದಾರೆ.
ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಯೊಂದಿಗೆ ಜಗಳವಾಡುತ್ತಿದ್ದ.ನಿನ್ನೆ ರಾತ್ರಿ ಮನೆಯಲ್ಲಿದ್ದ ಇಬ್ಬರು ಗಂಡು ಮಕ್ಕಳು ಟ್ಯೂಷನ್‌ಗೆ ತೆರಳಿದ್ದ ವೇಳೆ, ಮದ್ಯದ ಅಮಲಿನಲ್ಲಿ ಮನೆಗೆ ಬಂದ ರಘು ಪತ್ನಿಯೊಂದಿಗೆ ಜಗಳವಾಡಿ, ಮನೆಯಿಂದ ಹೊರಗೆ ಎಳೆದು ಚಾಕುವಿನಿಂದ ಎದೆಗೆ ಇರಿದು ಸ್ಥಳದಲ್ಲೇ ಹತ್ಯೆಗೈದಿದ್ದಾನೆ.
ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಘು ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ಘಟನೆ ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
