ಶ್ರವಣಬೆಳಗೊಳ : ಹಾಸನದ ಮೊಸಳೆ ಹೊಸಹಳ್ಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಶ್ರೀಕ್ಷೇತ್ರ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಇಂಜಿನಿಯರಿAಗ್ ವಿದ್ಯಾರ್ಥಿಗಳು ಸೇರಿ ಒಂಭತ್ತು ಜನ ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ. ಇದೊಂದು ಹೃದಯ ವಿದ್ರಾವಕ ಘಟನೆ. ಈ ದುರಂತದದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *