ಸಕಲೇಶಪುರ : ಸೆ.18: ತಾಲ್ಲೂಕಿನ ಹಾಲೇಬೇಲೂರು ಗ್ರಾಮದ ಗಣಪತಿ ದೇವಸ್ಥಾನದ ಬಳಿ ಅಬಕಾರಿ ಇಲಾಖೆಯ ದಾಳಿಯಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳು ಅಮೀರ್ ಜಾನ್ ಪ್ರಕಾಶ್ ಎಸ್.ಎಂ ಗುರುತಿಸಲ್ಪಟ್ಟಿದ್ದಾರೆ. ಇವರು ಗಾಂಜಾವನ್ನು ಮಾರಾಟದ ಉದ್ದೇಶಕ್ಕಾಗಿ ಸಾಗಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಅಬಕಾರಿ ನಿರೀಕ್ಷಕ ವೆಂಕಟೇಶ ಹೆಚ್.ಕೆ. ನೇತೃತ್ವದ ತಂಡ, ಗುರುವಾರ ರಾತ್ರಿ 10:10ಕ್ಕೆ ದಾಳಿ ನಡೆಸಿ KA-10-A-5198 ಸಂಖ್ಯೆಯ ತ್ರಿಚಕ್ರ ವಾಹನವನ್ನು ತಪಾಸಣೆ ಮಾಡಿದಾಗ 224 ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ.

ಗಾಂಜಾ ಹಾಗೂ ವಾಹನವನ್ನು ಜಪ್ತಿ ಮಾಡಲಾಗಿದೆ. ಪಟ್ಡಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *