ಸಕಲೇಶಪುರ:- ಸಕಲೇಶಪುರ ತಾಲೂಕು ಕುರಬತ್ತೂರು ಗ್ರಾಮಪಂಚಾಯಿತಿಯ ಶುಕ್ರವಾರ ಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ 9ನೇ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಂದು ಶಾಲಾ ಆವರಣದಲ್ಲಿ ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಹಾಗೂ ಯೋಗಾಸನವನ್ನು ಮಾಡುವ ಮೂಲಕ ಅರ್ಥಪೂರ್ಣ ಯೋಗ ದಿನಾಚರಣೆ ಆಚರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿಶ್ವ ಯೋಗ ದಿನಾಚರಣೆ ಆಚರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ವನ್ನು ಶಿಕ್ಷಕರು ಅರ್ಥಪೂರ್ಣವಾಗಿ ವಿವರಿಸಿದರು. ಇದರೊಂದಿಗೆ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ 9 ನೇ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *