
ಅರಸೀಕರೆ : ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರಿ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ಶನಿವಾರ ಅಭಿಮತ ವ್ಯಕ್ತಪಡಿಸಿದರು
ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮ ನಿರಂಜನ ಪೀಠದ ಆವರಣದಲ್ಲಿ ಆಯೋಜಿಸಿದ್ದ ಸೌಹಾರ್ದ ಸಹಕಾರ ಸಂಘದ 2024 25 ನೇ ಸಾಲಿನ ಚೊಚ್ಚಲ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು
ಸಹಕಾರ ಸಂಸ್ಥೆಗಳಲ್ಲಿಆಡಳಿತ ಮಂಡಳಿಯ ಅಧ್ಯಕ್ಷರು ನಿರ್ದೇಶಕರು ಹಾಗೂ ನೌಕರ ವರ್ಗ ಪ್ರಾಮಾಣಿಕತೆ ಯಿಂದ ಪಾರದರ್ಶಕವಾಗಿ ಬಡವ ಬಲ್ಲಿದಎಂಬ ತಾರತಮ್ಯವಿಲ್ಲದೆ ಉತ್ತಮ ಮನೋಭಾವ ಹೊಂದಿ ಕೆಲಸ ಮಾಡಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುವುದಲ್ಲದೆ ಸಂಘದ ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ ಆದ್ದರಿಂದ ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ ಮೂಲಕ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸ್ವಾಮೀಜಿ ಕಿವಿಮಾತು ಹೇಳಿದರು
ಗ್ರಾಮೀಣ ಭಾಗದಲ್ಲಿ ಇಂತಹ ಸಹಕಾರ ಸಂಘಗಳನ್ನು ಸ್ಥಾಪಿಸಿ ಆರ್ಥಿಕ ಹಿನ್ನಡೆಯ ಲ್ಲಿರುವ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿದಾಗ ಮಾತ್ರಅವರ ಬದುಕು ಹಸನಾಗುತ್ತದೆ ಎಂದರು ಸೌಹಾರ್ದ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ಮೈಸೂರು ಸಲಹೆಗಾರರಾದ ಶೇಖರ್ ಕೌಂಡಿನ್ಯ ಸಹಕಾರ ಸಂಘಗಳ ಕಾರ್ಯವೈಖರಿಯ ಬಗ್ಗೆ ಮಾತನಾಡಿದರು
ಸಹಕರಿ ಸಂಘದ ಉಪಾಧ್ಯಕ್ಷ ಎನ ಜಿ ಮರುಳ ಸಿದ್ದ ಸ್ವಾಮಿ ನಾಗಸಮುದ್ರ ವಾಸ್ತವಿಕವಾಗಿ ಮಾತನಾಡಿದರು
ಆರಂಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಆರ್ ಬಿ ಸುಷ್ಮಾ 24 25 ನೇ ಸಾಲಿನ ವರದಿ ಓದಿದರು
ಅರಸೀಕೆರೆ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಎಸ್ ಎಂ ಗಂಗಾಧರ್ ನಿರ್ದೇಶಕರಾದ ಎಲ ಸಿ ಚಂದ್ರಪ್ಪ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಂಪುರ ಶೇಖರಪ್ಪ ಜಿ ಪಂ ಮಾಜಿ ಸದಸ್ಯ ಎಂ ಎಸ್ ವಿ ಸ್ವಾಮಿ ಗ್ರಾಪಂ ಸದಸ್ಯಕೊಡ್ಲಿ ಬಸವರಾಜ್ ಮುಖಂಡರಾದ ಮಾಡಾಳು ಶಿವಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು
