ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನ್ನಾಡಲಿದ್ದಾರೆ. ಭಾಷಣದಲ್ಲಿ ಯಾವ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆ ಅನ್ನೋದ್ರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ದೇಶದ ಜನ ಗುಡ್​ನ್ಯೂಸ್ ನಿರೀಕ್ಷೆಯಲ್ಲಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನ್ನಾಡಲಿದ್ದಾರೆ. ಇಂದು ಮಧ್ಯರಾತ್ರಿಯಿಂದ ದೇಶದಲ್ಲಿ ಪರಿಷ್ಕೃತ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕಡಿತಗೊಳಿಸಿ ಜಾರಿ ಹಿಂದಿನ ದಿನ ಮೋದಿ ದೇಶವನ್ನು ಉದ್ದೇಶಿಸಿ ಮಾತನ್ನಾಡುತ್ತಿರೋದು ಭಾರೀ ಕುತೂಹಲ ಮೂಡಿಸಿದೆ.

ಆದರೆ ಮೋದಿ ಅವರು ತಮ್ಮ ಭಾಷಣದಲ್ಲಿ ಯಾವ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆ ಅನ್ನೋದ್ರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾಕೆಂದರೆ ನಾಳೆಯಿಂದ ನಾಡ ಹಬ್ಬ ದಸರಾ ಕೂಡ ಆರಂಭವಾಗ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ದೀಪಾವಳಿ ಕೂಡ ಬರಲಿದೆ. ಸಾಲು ಸಾಲು ಹಬ್ಬ ಹಿನ್ನೆಲೆಯಲ್ಲಿ ಮೋದಿ ಅವರ ಭಾಷಣೆ ಮೇಲೆ ದೇಶದ ಜನ ಗುಡ್​ನ್ಯೂಸ್ ನಿರೀಕ್ಷೆಯಲ್ಲಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *