ಬೇಲೂರು: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿ ದಾಳಿ. ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಶಿಕ್ಷಕಿ.

ಬೇಲೂರು.ಅಕ್ಟೋಬರ್. ೦೫.ಸಮೀಕ್ಷೆಗೆ ತೆರಳಿದ ಶಿಕ್ಷಕಿಗೆ ಬೀದಿ ನಾಯಿ ದಾಳಿ – ಶಾಸಕರ ಆಕ್ರೋಶ ” ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಮನೆ ಮನೆಗೆ ತೆರಳಿದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ತೀವ್ರವಾಗಿ ಕಚ್ಚಿದ್ದು, ಬಳಿಕ ಆರು ಜನರಿಗೂ ನಾಯಿ ಕಚ್ಚಿದ ಪರಿಣಾಮದಿಂದ ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕಳಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಹೆಚ್.ಕೆ.ಸುರೇಶ್ ಹಾಗೂ ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ಸಾಂತ್ವನ ಹೇಳಿದ್ದಾರೆ. ಸರ್ಕಾರ ಸಮೀಕ್ಷೆಗೆ ಶಿಕ್ಷಕರ ಮೇಲೆ ಒತ್ತಡ ಹೇರುತ್ತಿದೆ ಎಂದು ಶಾಸಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಹೊಯ್ಸಳ ನಗರದ ಬಡಾವಣೆಯಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದ ನೆಹರುನಗರ ಜಿಎಸ್ ಇ ಎಸ್ ಶಾಲೆಯ ಚಿಕ್ಕಮ್ಮ ಅವರು ತಮ್ಮ ಪತಿ ಶಿವಕುಮಾರ್ ಜೊತೆ ಮನೆ ಮನೆಗೆ ತೆರಳಿದ ಸಂದರ್ಭದಲ್ಲಿ ಬೀದಿ ನಾಯಿಯೊಂದು ಚಿಕ್ಕಮ್ಮನವರ ಮೇಲೆ ದಾಳಿ ನಡೆಸಿ ಕೆನ್ನೆ ಕಿವಿ ತೊಡೆ ಹೊಟ್ಟೆ ಭಾಗದಲ್ಲಿ ತೀವ್ರವಾಗಿ ಕಚ್ಚಿದ ಪರಿಣಾಮವಾಗಿ ಪತಿ ಶಿವಕುಮಾರ್ ಅವರು ಪತ್ನಿಯನ್ನು ಬಿಡಿಸಲು ಹೋದ ಸಮಯದಲ್ಲಿ ಅವರಿಗೂ ಕಚ್ಚಿ ಚಿಕ್ಕ ಪುಟ್ಟ ಗಾಯಗಳಾಗಿದ್ದು ಕೂಡಲೆ ಅವರನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ಇದೇ ನಾಯಿ ಮತ್ತೆ ಇತರ ನಾಯಿಗಳು ಸೇರಿಕೊಂಡು ಜೈ ಭೀಮ್ ನಗರದ ಬೀದಿಯಲ್ಲಿ ಆಟವಾಡುತ್ತಿದ್ದ ಸಿದ್ದೇಶ್ ಅವರ ಮಗ ಕಿಶನ್ ಎಂಬ ೫ ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಮಗುವನ್ನು ಕಚ್ಚಿ ಎಳೆದಾಡುವ ಸಂದರ್ಭದಲ್ಲಿ ಅವರ ತಾತ ಧರ್ಮಯ್ಯ ಹಾಗೂ ಇ ಜೊತೆಯಲ್ಲಿದ್ದ ಸಚಿನ್ ಪೃಥ್ವಿ ಸೇರಿದಂತೆ ಇತರರಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.

ಅಲ್ಲಿಯೇ ಇದ್ದ ಸ್ಥಳೀಯರು ಒಂದು ನಾಯಿಯನ್ನು ಹೊಡೆದು ಸಾಯಿಸಿದ್ದಾರೆ. ಬೇಲೂರು ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾದರೂ ಕೂಡ ಪುರಸಭೆ ಜಾಣ ಮೌನಕ್ಕೆ ಜಾರಿದೆ, ಶೀಘ್ರದಲ್ಲೇ ನಾಯಿಗಳನ್ನು ಹಿಡಿಸುವ ಕೆಲಸವನ್ನು ಮಾಡಬೇಕು ಇಲ್ಲವಾದರೆ ಪುರಸಭೆ ಮುಂದೆ ಉಗ್ರ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ತಿಳಿಯರು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ,ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಕಸಾಪ ಮಾಜಿ ಅಧ್ಯಕ್ಷ ಬಿ ಎಂ ಆನಂದ್,ಬಿ ಆರ್ ಸಿ ಶಿವಪ್ಪ ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *