ಕೊಡಗು : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ.

ಕಾಟಕೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ

ಇಂದು ಮುಂಜಾಜೆ 4-5 ಗಂಟೆ ಸುಮಾರಿಗೆ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ನೆಲೆಸಿದ್ದರು. ಆದರೆ ಓರ್ವ ಬಾಲಕ ಮಾತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾನೆ. ಬಾಲಕ 2 ನೇ ತರಗತಿಯಲ್ಲಿ ಓದುತ್ತಿದ್ದನು. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *