
ಸಕಲೇಶಪುರ : ಪಟ್ಟಣದ ಲಯನ್ಸ್ ಸೇವಾ ಮಂದಿರದಲ್ಲಿ ಗಾಂದಿ ಜಯಂತಿ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಧೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಧೆ ಹಲವಾರು ಕ್ಷೇತ್ರಗಳಲ್ಲಿ ಸೇವೆಯ ಮೂಲಕ ತನ್ನದೇ ಆದ ಛಾಪು ಮೂಡಿಸಿದೆ, ಹಾಗೇನೆ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ವೇಳೆಯಲ್ಲಿ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಹಳ್ಳಿಗಾಡಿನಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಿ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರಿಗೆ ಅತ್ಯಂತ ಮಾನ್ಯತೆ ನೀಡಿದಂತಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸಂಸ್ಧೆಯ ಹಿರಿಯ ಸದಸ್ಯ ಮಾಜಿ ರಾಜ್ಯಪಾಲ ಸಂಜೀತ್ ಶೆಟ್ಟಿ ಅವರ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕಿನ ಕಬ್ಬಿನ ಗದ್ದೆ ಹಿ.ಪ್ರಾಧಮಿಕ ಶಾಲೆ ಮಕ್ಕಳಿಗಾಗಿ ಲಾಪ್ ಟಾಪ್ ನೀಡಿದರು.
ಸಂಸ್ಧೆ ಅಧ್ಯಕ್ಷ ಗಿರೀಶ್ ಮಾತನಾಡಿ ಲಯನ್ಸ್ ಸಂಸ್ಧೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಗೌರವಿಸುವ ಮೂಲಕ ಸೇವಾ ಪ್ರತಿಬದ್ದತೆ ಮತ್ತು ಹೆಚ್ಚಿನ ಜವಾಬ್ದಾರಿಯುತ ನಾಗರಿಕರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಬಸವರಾಜ್, ಖಜಾಂಜಿ ಜಗದೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾ.ಅಧ್ಯಕ್ಷ ತಮ್ಮಣ್ಣ ಶೆಟ್ಟಿ, ನಿರ್ಧೇಶಕ ಕೆ.ಆರ್. ವೆಂಕಟೇಶ್, ಹಾಗೂ ಶಿಕ್ಷಕರು, ಲಯನ್ ಸದಸ್ಯರುಗಳು ಉಪಸ್ಧಿತರಿದ್ದರು
