ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದಾರೆ.,

ವಾರಾಂತ್ಯ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಜನರ ದಂಡೇ ಆಗಮಿಸುತ್ತಿದ್ದು, ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ., ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್‌ ಬುಕಿಂಗ್‌ ಕೂಡ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.

ಹಾಸನಾಂಬೆ ದೇವಸ್ಥಾನ ಹಾಗೂ ಸುತ್ತಮುತ್ತ ಭಾರೀ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.ಈಗಾಗಲೇ ಹಾಸನಾಂಬೆ ದರ್ಶನ ಪಡೆಯಲೆಂದು 50 ಸಾವಿರ ಜನರು ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಟಿಕೆಟ್ ಬುಕಿಂಗ್‌ ಕೂಡ ಸದ್ಯಕ್ಕೆ ಬಂದ್‌ ಆಗಿದೆ., ಹೀಗಾಗಿ ಬೆಂಗಳೂರು- ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಜನಸಂಖ್ಯೆ ನಿಯಂತ್ರಿಸಲು ಟಿಕೆಟ್‌ ಬುಕಿಂಗ್‌ (KSRTC Bus Ticket Booking) ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹಾಸನಾಂಬೆ ದೇಗುಲ ಹಾಗೂ ಸುತ್ತ ಮುತ್ತ ಬಾರಿ ಜನಸ್ತೋಮ ನೆರೆದಿದೆ. ಭಕ್ತರು ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇತ್ತ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರನ್ನು ನಿಯಂತ್ರಸಲು ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಈಗಾಗಲೇ ಸಹಸ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್‌ ಬುಕಿಂಗ್‌ ಕೂಡ ಸ್ಥಗಿತಗೊಳಿಸಲಾಗಿದೆ.

ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್‌ಗಟ್ಟಲೇ ಸಾಲು ದೊಡ್ಡದಾಗಿದೆ. 1,000 ರೂ. ಹಾಗೂ 300 ರೂ. ಟಿಕೆಟ್‌ ಪಡೆದ ಭಕ್ತರು ಪ್ರತ್ಯೇಕ ಸಾಲುಗಳಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ಎರಡೂ ಸಾಲುಗಳು ಕಿಲೋಮೀಟರ್‌ಗೂ ಅಧಿಕ ಉದ್ದವಾಗಿವೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *