ಹಾಸನ : ಹಾಸನಾಂಬ ದೇವಿ ದರ್ಶನ ಪಡೆದು ವಾಪಸ್ ಬರುವ ವೇಳೆ ಎರಡು ಬೈಕ್​ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ದುರ್ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತದಲ್ಲಿ ಇಬ್ಬರ ಸಾವು : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಓರ್ವ ಯುವತಿ ಸ್ಥಿತಿ ಚಿಂತಾಜನಕವಾಗಿದೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದೆ.

ಬೆಂಗಳೂರಿಂದ ದೇವಿ ದರ್ಶನಕ್ಕೆ ತೆರಳಿದ್ರು ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಬಂದಿದ್ದ ಬಸವರಾಜು, ಅನು (19), ಛಾಯಾ (20) ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ ನಲ್ಲಿ ವಾಪಸ್​ ಆಗ್ತಿದ್ದು, ಇದೇ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ KA-13 P-1521 ನಂಬರ್‌ನ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆ್ಯಕ್ಟಿವ್ ಹೋಂಡಾಗೆ ಡಿಕ್ಕಿ ಹೊಡೆದು ನಂತರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *