ಹಾಸನ : ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3182, ವಲಯ 9 ರ ವತಿಯಿಂದ ಪೋಲಿಯೋ ಮುಕ್ತ ಭಾರತ ಅಭಿಯಾನದ ಅಂಗವಾಗಿ ಇಂದು ನಮ್ಮ ಅಸಿಸ್ಟೆಂಟ್ ಗವರ್ನರ್ ರೋಟೇರಿಯನ್ ಜೆ. ಎನ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ ಹಾಸನ ನಗರದಲ್ಲಿ ಬೈಕ್ ಜಾಥಾವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಲ್ಲಿ ಪೋಲಿಯೋ ಕುರಿತು ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮವನ್ನು ಹಾಸನ ನಗರ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಿಡಿಜಿ ಎಂ. ಕೆ. ಜಿ. ಕುಮಾರ್ ರವರು, ವಲಯ 9 ರ ಎಲ್ಲಾ ಕ್ಲಬ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ 100 ಕ್ಕೂ ಹೆಚ್ಚು ರೋಟರಿ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಎಲ್ಲರಿಗೂ ಟೀಂ ಸನ್‌ರೈಸ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು.ಇಂತಿ,🌅 ಟೀಂ ಸನ್‌ರೈಸ್, ವಲಯ 9 – RID 3182

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *