ಸಕಲೇಶಪುರ : ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧವಾಗಿ, ಕಾಂಗ್ರೆಸ್ ಪ್ರದೇಶ ಸಮಿತಿಯ ವತಿಯಿಂದ ಸಹಿ ಸಂಗ್ರಹ ಅಭಿಯಾನದ ಮೂಲಕ ಚುನಾವಣಾ ಆಯೋಗದ ಕಣ್ಣು ತೆರೆಸಬೇಕಿದೆ ಎಂದು ಗ್ಯಾರೆಂಟಿ ಅನುಷ್ಠಾನ ಯೋಜನೆಯ ತಾಲೂಕು ಅಧ್ಯಕ್ಷ ಮುರಳಿ ಮೋಹನ್ ಹೇಳಿದರು.

ಪಟ್ಟಣದ ಅಶೋಕ ರಸ್ತೆಯಲ್ಲಿರುವ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮತದಾನದ ಹಕ್ಕು ಸಂವಿಧಾನದ ಪ್ರಕಾರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಅದನ್ನು ಕದಿಯುವ ಪ್ರಯತ್ನ ನಡೆಯುತ್ತಿರುವುದರಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರುಮುಡಿ ಚಂದ್ರು, ಆಲೂರು ತಾಲೂಕು ಗ್ಯಾರೆಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಪೃಥ್ವಿ, ಪುರಸಭೆಯ ಮಾಜಿ ಅಧ್ಯಕ್ಷ ಸಯ್ಯದ್ ಮುಫೀಸ್, ಕಾಂಗ್ರೆಸ್ ಮುಖಂಡರಾದ ದೇವರಾಜ್ ಬೈಕೆರೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪರ್ವತಯ್ಯ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣೇಗೌಡ, ಕಲ್ಗನೆ ಪ್ರಶಾಂತ್, ಹನೀಫ್ ರಾಯಲ್, ಅನಿಲ್ ವೈ.ಪಿ., ರಾಜೇಗೌಡ, ಆನೆ ಮಹಲ್ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಯ್ಯ ಸೇರಿದಂತೆ ಸಮಿತಿಯ ಕಾರ್ಯಕರ್ತರು, ಸ್ಥಳೀಯ ನಾಯಕರು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *