ಸಕಲೇಶಪುರ : ಶಿಸ್ತು ಮತ್ತು ಸಂಯಮವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಪರಿಶ್ರಮವಿದ್ದಲ್ಲಿ ಪ್ರತಿಭೆ ರೂಪುಗೊಳ್ಳುತ್ತದೆ’ ಎಂದು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪ್ರತಿಭಾ  ಮಂಜುನಾಥ್ ಹೇಳಿದರು.

ಶುಕ್ರವಾರ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪೋಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ವಿವಿಧ ವಿಷಯ  ತಿಳಿದುಕೊಳ್ಳುವ ಆಸಕ್ತಿ ಬೆಳೆಸಿಕೊಂಡರೆ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನ ಶೀಲರಾದರೆ ಜ್ಞಾನ ಅವರತ್ತ ಹರಿದು ಬರುತ್ತದೆ. ಇದರಿಂದ ವ್ಯಕ್ತಿತ್ವ ಉನ್ನತವಾಗಲು ಸಾಧ್ಯ’ ತಂದೆ ತಾಯಿಗಳಿಗೆ ಕೊಡುವ ಗೌರವವನ್ನು ವಿದ್ಯೆ ಕಲಿಸಿದ ಗುರುವಿಗೂ ಕೊಡುವುದನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೂ ಅದಕ್ಕೆ ಮೂಲ ಗುಣಾತ್ಮಕ ಶಿಕ್ಷಕ ಅಗತ್ಯ. ಇಂಥ ಅತ್ಯವಶ್ಯಕ ಶಿಕ್ಷಣವು ಶಿಕ್ಷಕರಿಂದ ಮಾತ್ರ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಜವಾಬ್ದಾರಿ ಹಾಗೂ ಮಹತ್ವದ ಪಾತ್ರಗಳ ಬಗ್ಗೆ ಬೇರೆ ಹೇಳಬೇಕಿಲ್ಲ ಎಂದರು.

ಕಾಲೇಜಿನ ಪ್ರಾಂಶುಪಾಲ ರಮೇಶ್ ಮಾತನಾಡಿ,ಸರ್ಕಾರದ ಆದೇಶದಂತೆ ರಾಜ್ಯದ್ಯಂತ ಏಕಕಾಲದಲ್ಲಿ ಪೋಷಕರ ಮಹಾ ಸಭೆ ನೆಡೆಸಲಾಗುತ್ತಿದೆ. ಸರ್ಕಾರಿ ಕಾಲೇಜಿನಲ್ಲಿ ದಾಖಲಾತಿ ಹೆಚ್ಚಿಸಲು ಇಂದಿನಿಂದ ಚಾಲನೆ ನೀಡುತ್ತಿದ್ದೇವೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಹಾಗೂ ಪೋಷಕರು ಸಭೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *