
ಬೆಂಗಳೂರು : ಕರ್ನಾಟಕ ವಚನ ಸಾಹಿತ್ಯ ಪರಿಷತ್,ಬೆಂಗಳೂರು ವತಿಯಿಂದ ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ನಡೆದ 70 ನೇ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಸನ ಜಿಲ್ಲಾ ಕನ್ನಡ ಪರ ಹೋರಾಟಗಾರ,ಕರವೇ ಜಿಲ್ಲಾ ಕಾರ್ಯದರ್ಶಿ, ಎಸ್.ಎಂ.ರಘುಪಾಳ್ಯ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಘುಪಾಳ್ಯ ಅವರ ಕನ್ನಡ ನಾಡು ನುಡಿ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.ಇದೇ ಸಂದರ್ಭದಲ್ಲಿ ವಿವಿಧ ಕಲಾ ತಂಡಗಳಿಂದ ಕನ್ನಡ ಗೀತಗಾಯನ, ಭರತನಾಟ್ಯ,ಜಾನಪದ ನೃತ್ಯ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿದವು.
ಸಮಾರಂಭದಲ್ಲಿ ಲಯನ್ ಬಿ.ಟಿ.ಮುನಿಯಪ್ಪ ನಿ.ಅಸಿಸ್ಟೆಂಟ್ ಕಮಿಷನರ್, ಬಿಡಿಎ ಬೆಂಗಳೂರು, ವಚನ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎಂ.ವಿ.ತ್ಯಾಗರಾಜ್,ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್.ಹೊಸಮನಿ, ವಿಜಯಲಕ್ಷ್ಮಿ ಸತ್ಯಮೂರ್ತಿ, ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ,ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ,ಯಶೋಧಮ್ಮ,ಸರೋಜಮ್ಮ, ಸಾಹಿತಿ ಪರಮೇಶ್ ಮಡಬಲು, ಪಟೇಲ್ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
