
ಸಕಲೇಶಪುರ: ರಾಜ್ಯದಲ್ಲಿ ಆನ್ ಲೈನ್ ಬೆಟ್ಟಿಂಗ್, ಆನ್ ಲೈನ್ ಗೇಮ್ಸ್ ಗಳನ್ನು ನಿಷೇದ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಬೆಳಗಾಂನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿ ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಹಾಗೂ ಆನ್ ಲೈನ್ ಗೇಮಿಂಗ್ ಆ್ಯಪ್ಗಳ ವ್ಯಸನಕ್ಕೆ ಹಾಸನ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದ ಹಲವೆಡೆ ಯುವಕರು ಈ ವ್ಯಸನಕ್ಕೆ ಬಲಿಯಾಗಿ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೈಬರ್ ಕ್ರೈಂ ಗಳಿಗೆ ಒಳಗಾಗಿ ಸಾವಿರಾರು ಯುವಕರು ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಪ್ರಸ್ತುತ ಇಡೀ ದೇಶದಲ್ಲಿ ಸೈಬರ್ ಅಪರಾಧಗಳ ಕುರಿತು ಕರ್ನಾಟಕದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.ಈ ಕುರಿತು ಸರ್ಕಾರ ಗಮನ ಹರಿಸಿ ಸೂಕ್ತ ರೀತಿಯ ಕಾನೂನು ರೂಪಿಸಬೇಕು ಹಾಗೂ ಕೇಂದ್ರ ಸರ್ಕಾರದ ಸೈಬರ್ ಕ್ರೈಂ ಸಹಾಯವಾಣಿ (1930) ರ ಮಾದರಿ ರಾಜ್ಯ ಸರ್ಕಾರದ ವತಿಯಿಂದಲೂ ಸಹಾಯವಾಣಿ ಸ್ಥಾಪಿಸುವ ಮೂಲಕ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕೆಂದು ಗೃಹಸಚಿವರನ್ನು ಉದ್ದೇಶಿಸಿ ಸದನದಲ್ಲಿ ಮಾತನಾಡಿದರು.
9ಎಸ್.ಕೆ.ಪಿ.ಪಿ 1 ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು
