ಗಾಂಧಿ ಹೆಸರನ್ನೇ ನಾಮಾವಶೇಷ ಮಾಡಲು ಹೊರಟಿರುವ ಲಜ್ಜೆಗೆಟ್ಟ ಬಿಜೆಪಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದಿಂದ ತೀವ್ರಖಂಡನೆ*” ದೇಶದ ಪ್ರತಿಯೊಂದು ಹಳ್ಳಿಗಳು ಹಾಗೂ ರೈತರುಗಳು ಸರ್ವತೋಮುಖ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ದೇಶದ ಸಂಪೂರ್ಣ ಅಭಿವೃದ್ಧಿ ಸಾಧ್ಯ ಎಂಬ ಕನಸನ್ನು ಸಾಕಾರಗೊಳಿಸುವಲ್ಲಿ ತನ್ನದೇ ಪಾತ್ರವನ್ನು ವಹಿಸುತ್ತಿದ್ದ ಮನರೇಗಾ ಉದ್ಯೋಗ ಖಾತ್ರಿ ಯೋಜನೆಗೆ ನರೇಂದ್ರ ಮೋದಿ ಪ್ರಧಾನಮಂತ್ರಿ ನೇತೃತ್ವದ ಬಿಜೆಪಿ ಸರ್ಕಾರವು ಗಾಂಧೀಜಿಯವರ ಹೆಸರನ್ನೇ ನಾಮಾವಶೇಷ ಮಾಡುವ ಮೂಲಕ ಮರುನಾಮಕರಣ ಮಾಡಲು ಹೊರಟಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ” ಎಂದು ಪಕ್ಷದ kpcc ರಾಜ್ಯ ಸಂಘಟನ ಕಾರ್ಯದರ್ಶಿ ಜೀಷಾನ್ ಖಾನ್ ತಿಳಿಸಿದ್ದಾರೆ.

” ಕೇಂದ್ರ ಸರ್ಕಾರದ ಮಂತ್ರಿಮಂಡಲವು ಈಗಾಗಲೇ ಈ ಯೋಜನೆಗೆ ಪೂಜ್ಯ ಬಾಪು ಗ್ರಾಮೀಣ ರೋಜಗಾರ್ ಖಾತರಿ ಎಂದು ಮರುನಾಮಕರಣ ಮಾಡಲು ನಿರ್ಧರಿಸಿತ್ತು. ಆದರೆ ಏಕಾಏಕಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸುವ ಮೂಲಕ ಗಾಂಧೀಜಿಯವರ ಹೆಸರನ್ನು ಹೊರಗಿಟ್ಟು ಜನಪ್ರಿಯ ಕಲ್ಯಾಣ ಕಾರ್ಯಕ್ರಮದ ಯಶಸ್ಸನ್ನು ತನ್ನದಾಗಿಸಿಕೊಳ್ಳುವ ದುರುದ್ದೇಶದಿಂದ ವಿಬಿ–ಜಿ– ರಾಮ್ ಜಿ ಎಂಬಂತಹ ಜನತೆಗೆ ಗೊಂದಲವನ್ನುಂಟು ಮಾಡುವ ನಾಮಾಂಕಿತವನ್ನು ಇಡುತ್ತಿರುವುದು ಪೂಜ್ಯ ಗಾಂಧೀಜಿಯವರಿಗೆ ಮಾಡಿದಂತಹ ಪರಮ ದ್ರೋಹ “” ಗಾಂಧೀಜಿಯವರ ಸ್ವರಾಜ್ಯ ಕಲ್ಪನೆಗೆ, ಅವರ ತ್ಯಾಗ ಬಲಿದಾನಕ್ಕೆ, ಅವರ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವಂತಹ ಕೋಮುವಾದಿ ಸಂಘಟನೆಗಳ ಮೂಲ ಅಜೆಂಡಾವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ದುಷ್ಟ ಪ್ರಯತ್ನವನ್ನು ಮಾಡುತ್ತಿರುವುದನ್ನು ಭಾರತೀಯರು ಎಂದಿಗೂ ಸಹಿಸುವುದಿಲ್ಲ.

ಇಡೀ ವಿಶ್ವದೆದುರು ತಲೆತಗ್ಗಿಸುವಂತಹ ಇಂತಹ ನೀಚ ಕೆಲಸಗಳಿಗೆ ಕೈ ಹಾಕುತ್ತಿರುವ ಪ್ರಧಾನಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ವಿ ಪಕ್ಷವು ತೀವ್ರ ಖಂಡನೆಯನ್ನು ವ್ಯಕ್ತಪಡಿಸುತ್ತದೆ ” ಎಂದು ಕೆಪಿಸಿಸಿ ರಾಜ್ಯ ಸಂಘಟನ ಕಾರ್ಯದರ್ಶಿ ಜೀಷಾನ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *