ಸಕಲೇಶಪುರ:- ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಪಿ ವಿಶ್ವನಾಥ್ ಆಯ್ಕೆಯಾದರು.

ಈ ಹಿಂದಿನ ಅಧ್ಯಕ್ಷರಾಗಿದ್ದ ದರ್ಶನ್ ಮರ್ಜನಹಳ್ಳಿಯವರು ಅಧಿಕಾರವಧಿ ಈ ಡಿಸಂಬರ್ ತಿಂಗಳು ಮುಗಿದಿದ್ದು ಶುಕ್ರವಾರ ನಡೆದ ಮಾಸಿಕ ಸಭೆಯಲ್ಲಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಎಚ್ ಡಿ ಪಿ ಎ ಮಾಜಿ ಸಂಘಟನಾ ಕಾರ್ಯದರ್ಶಿ ಕೆ. ಪಿ ಕೃಷ್ಣೇಗೌಡ, ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ನಿರ್ದೇಶಕರಾದ ವಿ.ಎಸ್ ಹರೀಶ್,ಬಿ. ಕೆ ಸುಬ್ರಹ್ಮಣ್ಯ,ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ಉಪಾಧ್ಯಕ್ಷರಾದ ರುದ್ರೇಶ್,ಖಜಾಂಚಿಯಾದ ಹೂವಣ್ಣ ಗೌಡ, ಕಾರ್ಯದರ್ಶಿ ಅರುಣ್ ಗೌಡ ಸೇರಿದಂತೆ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *