ಸಕಲೇಶಪುರ : ಕರ್ನಾಟಕ ಪಬ್ಲಿಕ್ ಶಾಲೆ, ಹೆತ್ತೂರು ಇಲ್ಲಿ ಸಕಲೇಶಪುರದ ಅಗ್ನಿಶಾಮಕ ಠಾಣೆ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಅಗ್ನಿ ಸುರಕ್ಷತಾ ಅರಿವು ಕುರಿತು ವಿಶೇಷ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಜರುಗಿತು.

ಸಕಲೇಶಪುರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಶ್ರೀ ಶಫೀಕ್ ತಹಸೀಲ್ದಾರ್ ಅಗ್ನಿ ಸುರಕ್ಷತೆ, ಅಗ್ನಿ ಅವಘಡಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಬಳಿಕ ಠಾಣಾ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕರಡಿಗಾಲ ವಹಿಸಿದ್ದರು.

ಪ್ರಾಂಶುಪಾಲ ಮಂಜುನಾಥ ಬಿ.ಡಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಳೇ ವಿದ್ಯಾರ್ಥಿ ಸಂಘದ ಸಚಿನ್ ಹೆಚ್.ಎಂ., ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯೋಪಾಧ್ಯಾಯ ಮಹೇಶ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಸತೀಶ್ ಹೆಚ್.ಕೆ., ಪತ್ರಕರ್ತರಾದ ಮಧು ಕುಮಾರ್ ಹೆತ್ತೂರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಉಪನ್ಯಾಸಕ ಸಿದ್ದೇಶ್ ಎಂ.ಎಲ್. ನಿರೂಪಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *