
ಸಕಲೇಶಪುರ :-ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ನೂರು ವರ್ಷ ಪೂರೈಸಿದ ಪ್ರಯುಕ್ತ ಇಂದು ಚಿಕ್ಕಮಂಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಮುಸ್ಥೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ವತಿಯಿಂದ ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘ ಹಾಗೂ ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದಿಂದ 21 ಬೆಳೆಗಾರರು ಇಂದು ಬೆಳಗ್ಗೆ 6 ಗಂಟೆಗೆ ಬಾಳೆಹೊನ್ನೂರಿಗೆ ಪ್ರಯಾಣ ಬೆಳೆಸಿದರು.
