*ಆತ್ಮೀಯ ಜೆಡಿಎಸ್ ಕಾರ್ಯಕರ್ತ ಬಂಧುಗಳೇ*

2026 ಜನವರಿ ತಿಂಗಳಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಸಮಾವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಮಾವೇಶದ ಪೂರ್ವಭಾವಿ ಚರ್ಚೆಗಾಗಿ ದಿನಾಂಕ 29.12.2025 ಸೋಮವಾರ ಬೆಳಗ್ಗೆ 11:00 ಗಂಟೆಗೆ ಹಾಸನ ಜ್ಞಾನಾಕ್ಷಿ ಕಲ್ಯಾಣ ಮಂಟಪ ದಲ್ಲಿ ನಮ್ಮೆಲ್ಲರ ನಾಯಕರಾದ ಮಾಜಿ ಪ್ರಧಾನಿಗಳು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದು

ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲಾ ಅಧ್ಯಕ್ಷರು ಭಾಗವಹಿಸುತ್ತಿದ್ದು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜೆಡಿಎಸ್ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಜನಪ್ರತಿನಿಧಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಮುಂದಿನ ಜೆಡಿಎಸ್ ಸಮಾವೇಶದ ಬಗ್ಗೆ ಚರ್ಚೆಯಲ್ಲಿ ಭಾಗವಹಿಸುವಂತೆ ಕೋರುತ್ತೇನೆ*

ಇಂತಿ ಹೆಚ್. ಕೆ. ಕುಮಾರಸ್ವಾಮಿ, ಮಾಜಿ ಸಚಿವರು ಕರ್ನಾಟಕ ಸರ್ಕಾರ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *