ಹಾಸನ : ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್‌ ಅವರು ಬೆಂಗಳೂರಿನಲ್ಲಿ ಶನಿವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರನ್ನು ಭೇಟಿಯಾಗಿ ಫೆಬ್ರವರಿ 2 ರಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುವ ನಾಡಪ್ರಭು . ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಆಹ್ವಾನ ಸ್ವಾಗತಿಸಿದ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹೆಚ್.ಎಂ.ವಿಶ್ವನಾಥ್ ಅವರು, ಮಲೆನಾಡು ಭಾಗದಲ್ಲಿ ಕಾಡುತ್ತಿರುವ ಕಾಡಾನೆಗಳ ಸಮಸ್ಯೆ ನಿವಾರಣೆಗೆ ಶ್ರೀಲಂಕಾ ಮಾದರಿಯಲ್ಲಿ ಆನೆಧಾಮ ನಿರ್ಮಾಣಕ್ಕೆ ಮುಂದಾಗಬೇಕೆಂದು ಕೋರಿದರು.

ಈ ವಿಚಾರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಮುಖ್ಯಮಂತ್ರಿ, ಅಂದು ಕಾಡಾನೆ ಸಮಸ್ಯೆ, ಆನೆಧಾಮ ನಿರ್ಮಾಣದ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಶ್ವನಾಥ್ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು ಮತ್ತಿತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *