
ಹೆತ್ತೂರು : ಯಡಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಶಾಲೆಯಲ್ಲಿ ಹೆತ್ತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಪ್ರಾಥಮಿಕ ಶಾಲೆ ಅಭಿವೃದ್ಧಿ ಅಧ್ಯಕ್ಷ ಶಿವಕುಮಾರ್ ಉದ್ಘಾಟನೆ ನೆರವೇರಿಸಿದರು ಸುಮಾರು 10 ಶಾಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ನೀಡಲಾಯಿತು.
ಹೆತ್ತೂರು ಕ್ಲಸ್ಟರ್ ಮಟ್ಟದ ಒಂದು ಕಲಿಕಾ ಹಬ್ಬಕ್ಕೆ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕಿ ಶೋಭಾ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಪ್ರವೀಣ್ , ಉಪಾಧ್ಯಕ್ಷರಾದ ಮೋಹನ್ ಕುಮಾರ್, ಯಡಕೆರೆ ಶಾಲೆಯ ಮುಖ್ಯ ಶಿಕ್ಷಕರಾದ ಆಶಾರಾಣಿ, ಹಾಗೂ ಬೇರೆ ಶಾಲೆಯಿಂದ ಬಂದಂತಹ ಮುಖ್ಯ ಶಿಕ್ಷಕರುಗಳು ಹಾಗೂ ಸಹ ಶಿಕ್ಷಕರು ಹಾಗೂ ನಿರ್ಣಾಯಕ ಶಿಕ್ಷಕರು ಊರಿನ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಕಾರ್ಯಕ್ರಮದ ಆಯೋಜನೆ ಮತ್ತು ಮಧ್ಯಾಹ್ನದ ಊಟದ ಉತ್ತಮ ವ್ಯವಸ್ಥೆ ವ್ಯವಸ್ಥೆ ಮಾಡಿದ ಯಡಕೇರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಆಶಾ ರಾಣಿ, ಸಹ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.




