
ಎಲ್ಲರಿಗೂ ಹೊಸ ಹಾರ್ದಿಕ ವರ್ಷದ ಹಾರ್ದಿಕ ಶುಭಾಶಯಗಳು….
ಹಾಸನ : ದಿನಾಂಕ 01.01.2026 ನೇ ಗುರುವಾರ ಹೊಸ ವರ್ಷದ ಪ್ರಯುಕ್ತ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಹಾಸನದ ಎಂ. ಕೃಷ್ಣ ಕಾನೂನು ಕಾಲೇಜು ಎದುರು ಇರುವ *”ಡಾ!! ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ “* ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಮತ್ತು ವಿದ್ಯಾರ್ಥಿಗಳೊಂದಿಗೆ ಹೊಸ ವರ್ಷ ಆಚರಣೆ ಕಾರ್ಯಕ್ರಮವನ್ನು ಸಂಜೆ 7.30ಕ್ಕೆ ಏರ್ಪಡಿಸಲಾಗಿತ್ತು.
ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷರು ರೋ!! ವಜ್ರ ಕುಮಾರ್ H D ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮತ್ತು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು….
ಕ್ಲಬ್ ನ ಕಾರ್ಯದರ್ಶಿಗಳು ಮತ್ತು ವಕೀಲರು ರೋ ಕೆ.ಎಸ್ ಯೋಗೇಶ್ ರವರು ರಸ್ತೆ ಸುರಕ್ಷತೆ, ಜಾಗೃತಿ, ನಿಯಮಗಳ ಬಗ್ಗೆ ಸವಿಸ್ತಾರವಾಗಿ ಉಪನ್ಯಾಸ ನೀಡುವುದರ ಈ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು…
ಈ ಕಾರ್ಯಕ್ರಮ ದಲ್ಲಿ ರೋ!!ರಾಜೇಶ್ ಸೇರಿದಂತೆ ಕ್ಲಬ್ ನ ಹಲವಾರು ಸದಸ್ಯರು ಮತ್ತು ಸುಮಾರು 80 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಸಿಹಿ ವಿತರಿಸಿ, ಹೊಸ ವರ್ಷದ ಸಂಭ್ರಮಾಚರಣೆ ಮಾಡಲಾಯಿತು….
ಇಂತಿ,ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಮಂಡಳಿ ಸದಸ್ಯರುಗಳು, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್, ಹಾಸನ.
