ಸಕಲೇಶಪುರ: ಐತಿಹಾಸಿಕ ಪ್ರಸಿದ್ಧ ಶ್ರೀ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಸಕಲೇಶಪುರ – ಆಲೂರು – ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಇಂದು ಕೊಡಗಿನ ಖಾಸಗಿ ಹೋಟೆಲ್‌ನಲ್ಲಿ ಸಂಸದರನ್ನು ಭೇಟಿ ಮಾಡಿ, ಮೈಸೂರು ರಾಜವಂಶಸ್ಥರಿಗೆ ಸಲ್ಲುವ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿ, ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿದರು.

ಫೆಬ್ರವರಿ 1 ಮತ್ತು 2 ರಂದು ಜರುಗಲಿರುವ ಜಾತ್ರಾ ಮಹೋತ್ಸವದ ಕುರಿತು ಮಾತನಾಡಿದ ಶಾಸಕ ಸಿಮೆಂಟ್ ಮಂಜು ಅವರು, “ಸಕಲೇಶಪುರದ ಶಕ್ತಿ ದೇವತೆಯಾದ ಶ್ರೀ ಸಕಲೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಪ್ರತಿವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ಫೆಬ್ರವರಿ 1 ಮತ್ತು 2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಬ್ರಹ್ಮರಥೋತ್ಸವ ಜರುಗಲಿದ್ದು, ಈ ಶುಭ ಸಂದರ್ಭದಲ್ಲಿ ರಾಜವಂಶಸ್ಥರ ಆಗಮನವು ಭಕ್ತರಿಗೆ ಮತ್ತಷ್ಟು ಸೌಭಾಗ್ಯವನ್ನು ತರಲಿದೆ,” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಪ್ರಮುಖ ಸದಸ್ಯರು ಉಪಸ್ಥಿತರಿದ್ದು, ಸಂಸದರೊಂದಿಗೆ ಜಾತ್ರೆಯ ಸಿದ್ಧತೆಗಳ ಕುರಿತು ಚರ್ಚಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *