ಸಕಲೇಶಪುರ :- ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ (ಟ್ರಸ್ಟ್‌), ಶುಕ್ರವಾರಸಂತೆ ವತಿಯಿಂದ 26ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಇಂದು ದಿನಾಂಕ 23-01-2026 ಶುಕ್ರವಾರ ಸಂಜೆ 5 ಗಂಟೆಗೆ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎನ್. ಭಾಸ್ಕರ್, ಅಧ್ಯಕ್ಷರು, ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಟ್ರಸ್ಟ್‌ ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಗದೀಶ್ ಕತ್ತಲವಡ್ಡ, ಬಿ.ಇ., ಎಲ್‌.ಎಲ್‌.ಬಿ.,ನಿರ್ದೇಶಕರು ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿರ್ದೇಶಕರು ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಮತಾ ಎಸ್., ಕೆ.ಇ.ಪಿ.ಎಸ್., ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಕಲೇಶಪುರ, ಪಿ.ವಿ. ಅಪ್ಪಾಜಿ, ಬಿ.ಸಿ.ಎ. ಅಭಿವೃದ್ಧಿ ಅಧಿಕಾರಿ, ಸಕಲೇಶಪುರ ಹಾಗೂ ಶ್ರೀ ಗಂಗಾಧರ್, ಬಿ.ಎ.ಸಿ., ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಕಲೇಶಪುರ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ನೃತ್ಯ, ಸಂಗೀತ, ನಾಟಕ, ಭಾಷಣ, ಶಾಲಾ ವಾದ್ಯವೃಂದ ಪ್ರದರ್ಶನ ಸೇರಿದಂತೆ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಿರುವ ಈ ಕಾರ್ಯಕ್ರಮಕ್ಕೆ ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಆಡಳಿತ ಮಂಡಳಿ ಮನವಿ ಮಾಡಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *