ಸಕಲೇಶಪುರ :-ಹಿಂದು ಸಮಾಜೋತ್ಸವ ಸಮಿತಿಯ ವತಿಯಿಂದ ಹಿಂದು ಸಮಾಚೋತ್ಸವ ಕಾರ್ಯಕ್ರಮವನ್ನು ಫೆಬ್ರವರಿ 07–02–2026ರಂದು ಶನಿವಾರದಂದು ಶ್ರೀ ಮುರುಗರಾಜೇಂದ್ರ ಕ್ರೀಡಾಂಗಣದಲ್ಲಿ ಭಕ್ತಿಭಾವ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಚಂಗಡಹಳ್ಳಿ, ಉಚ್ಚಂಗಿ ಹಾಗೂ ಹೊಸೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಭಕ್ತರು ಹಾಗೂ ಹಿಂದೂ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮವು ಸಂಜೆ 4.00 ಗಂಟೆಗೆ ಆರಂಭಗೊಳ್ಳಲಿದ್ದು, ಸಂಜೆ 5.00 ಗಂಟೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಸಂಜೆ 4.00 ಗಂಟೆಗೆ ‘ಶೋಭಾಯಾತ್ರೆ’ ಭವ್ಯ ಬೈಕ್ ರ್‍ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜರುಗಲಿದೆ.

ಶೋಭಾಯಾತ್ರೆಗೆ ಚಂಗಡಹಳ್ಳಿ ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಸ್ಥಾನದ ಆವರಣದಿಂದ ಚಾಲನೆ ನೀಡಲಾಗುವುದು.

ಶೋಭಾಯಾತ್ರೆಯಲ್ಲಿ ಕೇಸರಿ ಧ್ವಜಗಳು, ಧಾರ್ಮಿಕ ಘೋಷಣೆಗಳು ಹಾಗೂ ಭಕ್ತಿಗೀತೆಗಳೊಂದಿಗೆ ಯುವಕರು, ಗ್ರಾಮಸ್ಥರು ಉತ್ಸಾಹದಿಂದ ಶ್ರೀ ಮುರುಗರಾಜೇಂದ್ರ ಕ್ರೀಡಾಂಗಣದವರೆಗು ಭಾಗವಹಿಸಲಿದ್ದು, ಹಿಂದೂ ಸಂಸ್ಕೃತಿ, ಪರಂಪರೆ ಹಾಗೂ ಏಕತೆಯ ಸಂದೇಶವನ್ನು ಸಾರಲಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *