ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೇಲೂರು : ರಮೇಶ್ ಆತ್ಮಹತ್ಯೆ ಮಾಡಿಕೊಂಡ ರೈತ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಗೋಣಿ ಸೋಮೇನಹಳ್ಳಿ ಗ್ರಾಮದ ರೈತ.

ಕಳೆದ ಹತ್ತು ವರ್ಷಗಳ ಹಿಂದೆ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿ ಕೃಷಿಗಾಗಿ ಮಾಡಿ ಕೊಂಡಿದ್ದ ಸಾಲವನ್ನ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ಯಾಂಕಿನಲ್ಲಿ ಸಾಲ ಮಾಡಿ ಹಣದಿಂದ ಕೃಷಿ ಚಟುವಟಿಕೆ ಮಾಡಿದ್ದು ಅತಿವೃಷ್ಟಿ ಮತ್ತು ಅನಾವೃಷ್ಟಿಗಳ ನಡುವೆ, ಸರಿಯಾದ ಬೆಂಬಲ ಬೆಲೆ ಸಿಗದೇ ಹಿನ್ನೆಲೆ, ನಷ್ಟವನ್ನ ಅನುಭವಿಸಿತು ಬ್ಯಾಂಕ್ ಮತ್ತು ಕೈ ಸಾಲ ಸೇರಿಸುಮಾರು 20 ಲಕ್ಷದ ತನಕ ಸಾಲ ಮಾಡಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಈ ಸಂಬಂಧ ಹಳೆಬೀಡು ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಮೇಶ್‌ ಅಪ್ಪಟ ಬಿಜೆಪಿ ಕಾರ್ಯಕರ್ತನಾಗಿದ್ದು ಹಳೇಬೀಡು ಬಾಗದ ಸಕ್ರಿಯವಾಗಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಂತಹ ವ್ಯಕ್ತಿ.

ಸ್ಥಳಕ್ಕೆ ಶಾಸಕ ಸುರೇಶ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *