
ಸಕಲೇಶಪುರ : ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ ಯಸಳೂರು ಪ್ರಾದೇಶಿಕ ಅರಣ್ಯ ವಲಯ ಇವರ ವತಿಯಿಂದ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ತಡೆಯುವ ಬಗ್ಗೆ ಹಾಗೂ ವನ್ಯಜೀವಿ ಸಂರಕ್ಷಣೆಯ ಬಗ್ಗೆ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಶ್ರೀ ರೇವಣ್ಣ ಸಿದ್ದೇಶ್ವರ ಅವರು ಮಾತನಾಡುತ್ತಾ ಮಕ್ಕಳಲ್ಲಿ ಅರಣ್ಯ ಸಂರಕ್ಷಣೆ ಯಾವ ರೀತಿ ಮಾಡಬೇಕು ಎಂಬುದನ್ನು ಸಲಹೆ ನೀಡಿದರು.
ಮಕ್ಕಳು ಚಾಕ್ಲೇಟ್ ಸಿಪ್ಪೆಯನ್ನು ಎಲ್ಲಿಂದರಲ್ಲಿ ಹರಡಬಾರದು ಹಾಗೂ ಪರಿಸರದ ಬಗ್ಗೆ ಹೆಚ್ಚು ಪ್ರೀತಿ ಹೊಂದಬೇಕು ಹಾಗೂ ವನ್ಯಜೀವಿಗಳನ್ನು ಮಕ್ಕಳ ಹಾಗೆ ಸಂರಕ್ಷಣೆ ಮಾಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೈಸೂರು ಕಲಾತಂಡದಿಂದ ನಾಟಕ ಪ್ರದರ್ಶನ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕರಡಿಗಾಲ ಹರೀಶ್ ರವರು ಮಾತನಾಡುತ್ತಾ ಎಸಳೂರು ಅರಣ್ಯ ಇಲಾಖೆಯ ಈ ಕಾರ್ಯವನ್ನು ಶ್ಲಾಘಿಸಿದರು ಪ್ರಾಂಶುಪಾಲರಾದ ಶ್ರೀ ಮಂಜುನಾಥ ಸರ್ ರವರು ವಂದಿಸಿದರು.
ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಭಾಸ್ಕರ್ ಸರ್ ಹಾಗೂ ಮುಖ್ಯೋಪಾಧ್ಯಾಯರಾದ ಸತೀಶ್ ಸರ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಸುಮ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಿಕ್ಷಕ ವೃಂದದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.





