
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬ*ರವಾಗಿ ಹ*ತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರಪ್ಪ (58) ಕೊ*ಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕುಟುಂಬ ಸದಸ್ಯರ ಪ್ರಕಾರ, ದಾಯಾದಿಗಳ ನಡುವೆ ಆಸ್ತಿ ವಿವಾದ ನಡೆಯುತ್ತಿದ್ದು, ಇದೇ ಕಾರಣಕ್ಕೆ ಹ*ತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ಆಲೂರಿನಲ್ಲಿ ಕೋರ್ಟ್ ವಿಚಾರಣೆ ಹಾಜರಾಗಿ ಬಳಿಕ ತಮ್ಮ ಜಮೀನಿನ ಕಡೆಗೆ ಬಂದಿದ್ದ ವೀರಪ್ಪ ಅವರನ್ನು ದುಷ್ಕರ್ಮಿಗಳು ಹಿಂಬಾಲಿಸಿ ಹ*ಲ್ಲೆ ನಡೆಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ವೀರಪ್ಪ ಅವರ ಮೃ*ತದೇಹ ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಶುಭನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣವು ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಗಳ .ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
