
ಸಕಲೇಶಪುರ : ತಾಲ್ಲೂಕಿನ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ನಿರ್ದೇಶಕರಾದ ಚಂದ್ರಕಲಾ ಪ್ರಕಾಶ್ ಅವರು ಉದ್ಘಾಟಿಸಿ ಮಾತನಾಡಿ, “ಇಂತಹ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳ ಪ್ರತಿಭೆ ಹೊರಹೊಮ್ಮಲು ಉತ್ತಮ ವೇದಿಕೆ. ಪಠ್ಯಪಾಠದ ಜೊತೆಗೆ ವೈಜ್ಞಾನಿಕ ಚಿಂತನೆ ಬೆಳೆಸಲು ಇದು ಸಹಕಾರಿ,” ಎಂದು ಹೇಳಿದರು.
ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳು ನೆರೆದಿದ್ದ ಪೋಷಕರು ಹಾಗೂ ತೀರ್ಪುಗಾರರ ಗಮನ ಸೆಳೆದವು. ಮೆಚ್ಚುಗೆ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ವರ್ಗದವರು ಬಹುಮಾನಗಳನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಖಜಾಂಚಿಯಾದ ರೇಣುಕಾ ಕುಮಾರ್, ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.





