ಆಲೂರು : ನಿರಂತರ ಕ್ರೀಡಾ ಚಟುವಟಿಕೆಯಿಂದ ದೈಹಿಕ ಹಾಗೂ ಮಾನಸಿಕ ಅರೋಗ್ಯ ವೃದ್ಧಿಯಾಗುತ್ತದೆ ಎಂದು ಸಂಸದ ಶ್ರೇಯಸ್ ಎಂ ಪಟೀಲ್ ತಿಳಿಸಿದರು.

ತಾಲ್ಲೂಕಿನ ಪಾಳ್ಯ ಹೋಬಳಿ ಕಣತೂರು ಗ್ರಾ ಪಂ ವ್ಯಾಪ್ತಿಯ ಡೀಪ್ ಕಟಿಂಗ್ ಕೊಡಗೀಹಳ್ಳಿ ಗ್ರಾಮದಲ್ಲಿ ಜೆ ಕೆ ಕ್ರಿಕೆಟರ್ಸ್ ವತಿಯಿಂದ ನಡೆದ ” ಶ್ರೇಯಸ್ ಕಪ್ ” ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ನಮ್ಮಲ್ಲಿನ ಆತ್ಮಶಕ್ತಿಯನ್ನು ವೃದ್ಧಿಸಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವಂತೆ ತಿಳಿಸಿದರು. ಸಮಾಜ ಸೇವಕ, ಸಕಲೇಶಪುರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್ ಮಾತನಾಡಿ, ಕ್ರೀಡೆಗಳು ಮನಸಿನಲ್ಲಿರುವ ನಕಾರಾತ್ಮಕ ಚಿಂತನೆಗಳನ್ನು ತೆಗೆದು ಹಾಕುವ ಮೂಲಕ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದರು.

ಸಮಾರಂಭದಲ್ಲಿ ಸಂಸದ ಶ್ರೇಯಸ್ ಎಂ ಪಟೀಲ್, ಸಕಲೇಶಪುರ ಹಾಗೂ ಆಲೂರು ತಾಲೂಕುಗಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್, ಆಲೂರು ತಾಲೂಕು ಅಧ್ಯಕ್ಷ ಪೃಥ್ವಿ ಜಯರಾಮ್, ಕ್ರೀಡಾಂಗಣ ದಾನಿ ನಿಂಗರಾಜು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆಲೂರು ತಾಲೂಕು ಘಟಕದ ಅಧ್ಯಕ್ಷ ಆದಿಲ್, ಕಾಂಗ್ರೆಸ್ ಮುಖಂಡರಾದ ಅಜ್ಜೇನಹಳ್ಳಿ ಲೋಕೇಶ್, ಖಾಲೀದ್ ಪಾಷ, ರಾಜಶೇಖರ್, ಸಂದೇಶ್ ಎ ಜೆ, ಲೋಕೇಶ್ ಮಡಬಲು , ಪ್ರಭು, ಬ್ಯಾಬ ನಂದೀಶ್, ಜೆ ಕೆ ಕ್ರಿಕೆಟರ್ಸ್ ಸದಸ್ಯರು ಸೇರಿದಂತೆ ನೂರಾರು ಕ್ರೀಡಾ ಪಟುಗಳು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *