
ಸಕಲೇಶಪುರ: -ತಾಲ್ಲೂಕಿನ ಶ್ರೀ ಕ್ಷೇತ್ರ ವಳಲಹಳ್ಳಿಯ ಓಂ ಶ್ರೀ ಗುರು ಶನೈಶ್ಚರ ಸ್ವಾಮಿಯ ದೇವಸ್ಥಾನದಲ್ಲಿ 15ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮಾರ್ಚ್ 6 ಮತ್ತು 7, 2026 ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಮಾರ್ಚ್ 6ರಂದು ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ, ಹೋಮ ಹಾಗೂ ಇತರ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಮಧ್ಯಾಹ್ನ ಮಹಾಪೂಜೆ ಹಾಗೂ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.ಮಾರ್ಚ್ 7ರಂದು ಬೆಳಿಗ್ಗೆಯಿಂದಲೇ ಗಂಗಾ ಪೂಜೆ , ನವಗ್ರಹ ಪೂಜೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರ ಸಮ್ಮುಖದಲ್ಲಿ ಮಹಾಮಂಗಳಾರತಿ ನೆರವೇರಲಿದೆ.
ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಉಪನ್ಯಾಸಗಳು ಹಾಗೂ ಶನಿವಾರ ಸಂಜೆ ಅಪ್ಪು ಇವೆಂಟ್ಸ್ ವತಿಯಿಂದ ಭಕ್ತಿಗೀತೆಗಳ ಕಾರ್ಯಕ್ರಮವೂ ಇರಲಿದೆ. ದೇವಾಲಯದ ವಾರ್ಷಿಕೋತ್ಸವವನ್ನು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 8105700068, 7019097968 ಸಂಪರ್ಕಿಸಬಹುದು.

