ಸಕಲೇಶಪುರ : ವಿಶ್ವದಾದ್ಯಂತ 250ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಯನ್ಸ್ ಸಂಸ್ಥೆ ಸುಮಾರು 14 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಸೇವಾ ಸಂಸ್ಥೆಯಾಗಿದ್ದು, ಜಿಲ್ಲೆಯ ಸುಮಾರು 4600 ಸದಸ್ಯರು ವಿವಿಧ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಲಯನ್ಸ್ ಸಂಸ್ಥೆಯ ಗವರ್ನರ್ ಕುಡುಪಿ ಅರವಿಂದ್ ಶೇಣೈ ಹೇಳಿದರು.

ಸಕಲೇಶಪುರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಲಯನ್ಸ್ ಸಂಸ್ಥೆ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಜನಸೇವೆಯನ್ನು ಮುಖ್ಯ ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಸಕಲೇಶಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಗಿರೀಶ್, ಸಕಲೇಶಪುರ ಲಯನ್ಸ್ ಸಂಸ್ಥೆ ಕಳೆದ ಹಲವು ವರ್ಷಗಳಿಂದ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಂಡು ಜನರಿಗೆ ನೆರವಾಗುತ್ತಿದೆ. ಸಂಸ್ಥೆ ಈಗ 50ನೇ ವರ್ಷದ ಸಂಭ್ರಮದತ್ತ ಸಾಗುತ್ತಿದ್ದು, ಮುಂದಿನ ವರ್ಷ ಸ್ವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

49ನೇ ಅಧ್ಯಕ್ಷರಾಗಿರುವ ನನ್ನ ಅವಧಿಯಲ್ಲಿ ಉದೇವಾರದಲ್ಲಿ ನೂತನ ರುದ್ರ ಭೂಮಿ ನಿರ್ಮಿಸಿ ಈ ದಿನ ಸಾರ್ವಜನಿಕ ಸೇವೆಗಾಗಿ ರಾಜ್ಯಪಾಲರು ಉದ್ಘಾಟಿಸಿದ್ದಾರೆ ಎಂದರು .ಮಾಜಿ ರಾಜ್ಯಪಾಲ ಎಲ್ಸಿಎಫ್ ಸಂಯೋಜಕ ಸಂಜೀತ್ ಶೆಟ್ಟಿ ಮಾತನಾಡಿ ಗಿರೀಶ್ ಅವರ ಅವಧಿಯಯಲ್ಲಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ಕೆಲಸಗಳನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಅಧ್ಯಕ್ಷರ ನೇತೃತ್ವದಲ್ಲಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹಾಗೂ ಸಮಾಜ ಸೇವಾ ಕಾರ್ಯಕ್ರಮಗಳನ್ನು ಮುಂದುವರಿಸುತ್ತಿದೆ ಎಂದರು.

ಮುಂದಿನ ವರ್ಷ ನಡೆಯಲಿರುವ 50ನೇ ವರ್ಷದ ಸಂಭ್ರಮದ ಅಂಗವಾಗಿ ಇನ್ನೂ ಹಲವು ಅಭಿವೃದ್ಧಿ ಕಾರ್ಯಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ ಎಂದು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಬಸವರಾಜ್, ಖಜಾಂಚಿ ಜಗದೀಶ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *