ಸಕಲೇಶಪುರ : ತಾಲೂಕಿನ ಹಾನುಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಹಾಗೂ ತಾಯಿ-ಮಗು ಆರೈಕೆಯ ಕುರಿತು ಅರಿವು ಹೆಚ್ಚಿಸುವ ಉದ್ದೇಶದಿಂದ ಸುಮಾರು 25 ಗರ್ಭಿಣಿಯರಿಗಾಗಿ ಸಾಂಪ್ರದಾಯಿಕ ಸೀಮಂತ ಕಾರ್ಯಕ್ರಮವನ್ನು ವೈಭವದಿಂದ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಪೂರ್ವ ಬೆಂಗಳೂರಿನ ಟಿಎಚ್ಒ (ವೈದ್ಯಾಧಿಕಾರಿ) ಡಾ. ರಘುನಾಥ್ ಭಾಗವಹಿಸಿ, ಗರ್ಭಿಣಿಯರ ಆರೋಗ್ಯದ ಮಹತ್ವವನ್ನು ವಿವರವಾಗಿ ತಿಳಿಸಿದರು.

ಇಂದಿನ ದಿನಗಳಲ್ಲಿ ಇಂತಹ ಸಮಾಜಮುಖಿ ಆರೋಗ್ಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉತ್ತಮ ಆರೋಗ್ಯ ಸೇವೆ ತಲುಪಿಸುವುದು ತಮ್ಮ ಉದ್ದೇಶವೆಂದು ಅವರು ತಿಳಿಸಿದರು.

ತಾಲೂಕು ಅಧಿಕಾರಿಗಳಾದ ಡಾ. ಮಹೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸರ್ಕಾರದ ವಿವಿಧ ಗರ್ಭಿಣಿ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಗರ್ಭಧಾರಣೆಯ ಅವಧಿಯಲ್ಲಿ ಪಾಲಿಸಬೇಕಾದ ಆರೋಗ್ಯ ಕ್ರಮಗಳು, ಪೌಷ್ಠಿಕ ಆಹಾರದ ಮಹತ್ವ ಹಾಗೂ ನಿಯಮಿತ ತಪಾಸಣೆಗಳ ಅಗತ್ಯತೆ ಕುರಿತು ಸಮಗ್ರ ಮಾಹಿತಿ ನೀಡಿದರು. ಜೊತೆಗೆ ಸೀಮಂತದ ಸಾಂಪ್ರದಾಯಿಕ ಮಹತ್ವ ಮತ್ತು ಭಾರತೀಯ ಸಂಸ್ಕೃತಿಯಲ್ಲಿ ಅದರ ಸ್ಥಾನ ಕುರಿತು ವಿವರಿಸಲಾಯಿತು.

ತಾಯಿ ಹಾಗೂ ಗರ್ಭದಲ್ಲಿರುವ ಶಿಶುವಿನ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾನುಬಾಳು ಪಿಎಚ್‌ಸಿ ವೈದ್ಯಾಧಿಕಾರಿಯಾದ ಡಾ. ನಿಶ್ಚಯ್ ಹೆಚ್.ಎನ್ ವಹಿಸಿ, ಗರ್ಭಿಣಿಯರಿಗೆ ಲಭ್ಯವಿರುವ ಆರೋಗ್ಯ ಸೇವೆಗಳು, ಸರ್ಕಾರಿ ಸೌಲಭ್ಯಗಳು ಹಾಗೂ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸಾ ವ್ಯವಸ್ಥೆಗಳ ಕುರಿತು ವಿವರಿಸಿದರು.

ಕಾರ್ಯಕ್ರಮದ ಅಂಗವಾಗಿ ಗರ್ಭಿಣಿಯರಿಗೆ ಉಪಯುಕ್ತ ಸಲಹೆಗಳು ಮತ್ತು ಮಾರ್ಗದರ್ಶನ ನೀಡಲಾಯಿತು.ಈ ರೀತಿಯ ಕಾರ್ಯಕ್ರಮಗಳು ಗ್ರಾಮೀಣ ಭಾಗದಲ್ಲಿ ತಾಯಿ-ಮಗು ಆರೋಗ್ಯ ಸುಧಾರಣೆಗೆ ಮಹತ್ವದ ಪಾತ್ರವಹಿಸುತ್ತಿದ್ದು, ಹಾನುಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ಈ ಪ್ರಯತ್ನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಡಾ. ರಿಜ್ವಾನ್, ಡಾ. ಮಿಥುನ್ ಸೇರಿದಂತೆ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *