
ಬೇಲೂರು : ತಾಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ಟಿಪ್ಪರ್ ಲಾರಿಗೆ ಮೇಲ್ನೋಟದ ವಿದ್ಯುತ್ ತಂತಿ ಸ್ಪರ್ಶಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮನೆ ನಿರ್ಮಾಣ ಕಾರ್ಯಕ್ಕಾಗಿ ಎಂ. ಸ್ಯಾಂಡ್ ತರಲಾಗುತ್ತಿದ್ದ ಟಿಪ್ಪರ್ ಲಾರಿಯನ್ನು ಚಾಲಕ ಮೇಲಕ್ಕೆ ಲಿಫ್ಟ್ ಮಾಡುವ ವೇಳೆ ಮೇಲ್ಭಾಗದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಇದ್ದ ಪರಿಣಾಮ ಅವಘಡ ಸಂಭವಿಸಿದೆ.
ಲಾರಿ ತಂತಿಗೆ ಸ್ಪರ್ಶಿಸುತ್ತಿದ್ದಂತೆಯೇ ವಿದ್ಯುತ್ ಪ್ರವಹಿಸಿ ಚಾಲಕನಿಗೆ ತೀವ್ರ ವಿದ್ಯುತ್ ಶಾಕ್ ಹೊಡೆದು, ಕ್ಷಣಾರ್ಧದಲ್ಲೇ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಮನೆ ನಿರ್ಮಾಣ ಕಾರ್ಯಕ್ಕಾಗಿ ಮಂಜುನಾಥ್ ಎಂಬುವರ ಮನೆಗೆ ಎಂ. ಸ್ಯಾಂಡ್ ತರಲಾಗುತ್ತಿದ್ದು ಈ ಘಟನೆ ನಡೆದಿದೆ.
ಈ ವೇಳೆ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಹಾಗೂ ಸರಿಯಾದ ಮಾಹಿತಿ ನೀಡದಿರುವುದೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
