ಸಕಲೇಶಪುರ : ಪಟ್ಟಣದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯತ ಯುವ ಸೇನೆ (ರಿ) ವತಿಯಿಂದ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಏಳನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅನ್ನದಾಸೋಹ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, “ಶ್ರೀ ಶಿವಕುಮಾರ ಸ್ವಾಮೀಜಿ ತಮ್ಮ ಜೀವನದ 89 ವರ್ಷಗಳನ್ನು ಸಮಾಜ ಸೇವೆಗೆ ಅರ್ಪಿಸಿದ ಮಹಾನ್ ವ್ಯಕ್ತಿತ್ವ. ಯಾವುದೇ ವಿಶ್ರಾಂತಿ ಪಡೆಯದೆ ಸಮಾಜದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿದ ಅವರು ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದ್ದಾರೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ UPSC ಪರೀಕ್ಷೆಯಲ್ಲಿ 389ನೇ ರ್ಯಾಂಕ್ ಪಡೆದ ಸಕಲೇಶಪುರದ ಮನೋಜ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಲ್ಮಠದ ಮಹಾಂತ ಮಹಾಸ್ವಾಮೀಜಿ, ತಣ್ಣೀರುಹಳ್ಳ ಮಠದ ವಿಜಯಕುಮಾರ ಸ್ವಾಮೀಜಿ, ವೀರಶೈವ ಲಿಂಗಾಯಿತ ಯುವ ಸೇನೆ ಅಧ್ಯಕ್ಷ ಸಾಗರ್ ಜಾನೆಕೆರೆ, ವೀರಶೈವ ಯುವಸೇನೆಯ ನಾಗೇಂದ್ರ ಪಟೇಲ್, ಹರೀಶ್, ಮಲೆನಾಡು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಮೂಗಲಿ ಧರ್ಮಪ್ಪ, ಕಾರ್ಯದರ್ಶಿ ಯಡೇಹಳ್ಳಿ ಮಂಜುನಾಥ್, ಮಾಜಿ ಶಾಸಕರುಗಳಾದ ಎಚ್.ಕೆ ಕುಮಾರಸ್ವಾಮಿ, ಎಚ್.ಎಂ ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಬಿಜೆಪಿ ಮುಖಂಡರುಗಳಾದ ಪುನೀತ್ ಬನ್ನಹಳ್ಳಿ, ಕಟ್ಟೆಗದ್ದೆ ನಾಗರಾಜ್, ಶಾಸಕರ ಧರ್ಮಪತ್ನಿ ಪ್ರತಿಭಾ ಮಂಜುನಾಥ್, ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *