ಸಕಲೇಶಪುರ : ಕ್ಯಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಗರವಳ್ಳಿ ಗ್ರಾಮದ ವಿದ್ಯಾರ್ಥಿನಿ ಅಂಜಲಿ ಕೆ.ಪಿ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90.5 ಅಂಕಗಳನ್ನು (600ರಲ್ಲಿ 543) ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.

ಈ ಮೂಲಕ ತಮ್ಮ ಊರಿಗೆ ಹಾಗೂ ತಂದೆ-ತಾಯಿಗೆ ಹೆಮ್ಮೆ ತಂದಿದ್ದಾರೆ.

ಅಂಜಲಿ ಅವರು ಪರಮೇಶ್ ಮತ್ತು ದಿವ್ಯ ದಂಪತಿಯ ಪುತ್ರಿಯಾಗಿದ್ದು, ಸುಬ್ರಮಣ್ಯದ ಎಸ್.ಎಸ್. ಪಿಯುಸಿ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದರು. ಪರಿಶ್ರಮ, ನಿಯಮಿತ ಅಧ್ಯಯನ ಹಾಗೂ ದೃಢ ನಿಶ್ಚಯದ ಫಲವಾಗಿ ಈ ಉತ್ತಮ ಫಲಿತಾಂಶ ಸಾಧಿಸಿದ್ದಾರೆ.

ಅವರ ಈ ಸಾಧನೆಗೆ ಶಿಕ್ಷಕರು, ಕುಟುಂಬದವರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *