
ಸಕಲೇಶಪುರ: ಪಟ್ಟಣದ ಪುರಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸಕಲೈಶ್ವರ್ಯ ಬ್ಲಾಕ್ ಸೊಸೈಟಿ (ರಿ) ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 25ನೇ ವರ್ಷದ ಬೆಳ್ಳಿ ಮಹೋತ್ಸವ ಸಮಾರಂಭ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಹೆಣ್ಣು ಮಕ್ಕಳ ಉಳಿತಾಯ ದೇಶದ ಅಭಿವೃದ್ದಿಗೆ ದೊಡ್ಡ ಕೊಡುಗೆ ಕೊಡುತ್ತದೆ ಎಂದರೆ ತಪ್ಪಿಲ್ಲ, ಮಹಿಳೆಯರ ಉಳಿತಾಯ ದೇಶದ ಆರ್ಥಿಕತೆ ಏಳಿಗೆಗೆ ದೊಡ್ಡ ಕೊಡುಗೆಯಾಗಿದೆ. ಮಹಿಳೆಯರು ಕುಟುಂಬದ ಇತರರ ಆರೋಗ್ಯದ ಕಡೆಗೆ ಗಮನ ಹರಿಸುವ ಜೊತೆಗೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಮಹಿಳೆಯರು ವರ್ಷಕ್ಕೆ ಒಮ್ಮಯಾದರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಮುಂದಾಗಬೇಕು ಎಂದರು.
ಈ ಸಂಧರ್ಭದಲ್ಲಿ ಹೇಮಾವತಿ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಭಾರತಿಗೌಡ, ಸಕಲೈಶ್ವರ್ಯ ಬ್ಲಾಕ್ ಸೊಸೈಟಿ ಅಧ್ಯಕ್ಷ ಲತಾ ಜಯನಂದಾ,.ಮುಂತಾದವರು ಹಾಜರಿದ್ದರು.
