
ಸಕಲೇಶಪುರ. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ಅದ್ದೂರಿಯಾಗಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್‌ರವರ 135ನೇ ವರ್ಷದ ಜನ್ಮದಿನಾಚರಣೆಯನ್ನು ಅರ್ಥ ಪೂರ್ಣವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.
ಮೊದಲಿಗೆ ತಾಲೂಕು ಆಡಳಿತ ಸೌದದ ಮುಂಭಾಗದಲ್ಲಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತದಿಂದ ಮಾಲಾರ್ಪಣೆ ಮಾಡಿ ಅಂಬೇಡ್ಕರ್ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವೇದಿಕೆ ಕಾರ್ಯಕ್ರಮವನ್ನು ಅಂಬೇಡ್ಕರ್ ಸಮುದಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವೇಳೆ ಕಾರ್ಯಕ್ರಮದಲ್ಲಿ ಸಕಲೇಶಪುರ ಉಪವಿಭಾಗಾಧಿಕಾರಿ,ಹುಲ್ಲುಮನಿ ತಿಮ್ಮಣ್ಣ ತಹಶೀಲ್ದಾರ್ ಸುಪ್ರೀತಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗಂಗಾಧರ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಜ್ ಹಾಗೂ ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳು, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.





