ಸಕಲೇಶಪುರ : ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಸಕಲೇಶಪುರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಹುಲ್ಲುಮನಿ ತಿಮ್ಮಣ್ಣ (KAS) ಅವರನ್ನು ಆತ್ಮೀಯವಾಗಿ ಭೇಟಿ ಮಾಡಿ ಗೌರವಿಸಿ ಭವ್ಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಶುಭಾಶಯಗಳನ್ನು ಕೋರಿ, ತಾಲೂಕಿನಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಪ್ರತಿಕ್ರಿಯೆ ನೀಡಿದ ನೂತನ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಅವರು ಜನಪರ ಆಡಳಿತಕ್ಕೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ಶಾಂತ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ತಮ್ಮಣ್ಣಶೆಟ್ಟಿ ವೈ.ಎಸ್., ಕಾರ್ಯದರ್ಶಿ ಜಗದೀಶ್ ಎನ್.ಎನ್., ನಿವೃತ್ತ ಪಿಡಿಓಗಳಾದ ಕೊಮರಯ್ಯ ಮತ್ತು ನಿಂಗಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿಯಾದ ಸಲೀಂ, ನಿರ್ದೇಶಕರಾದ ವೆಂಕಟೇಶ್, ಸ್ವಾಮಿನಾಯಕ್ ಹಾಗೂ ಶೇಖರ್ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed