ಸಕಲೇಶಪುರ : ಪುರಸಭಾ ವ್ಯಾಪ್ತಿಯಲ್ಲಿ ಬದಲಾವಣೆಗೆ ಪ್ರಯತ್ನಿಸುತ್ತಿರುವ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಟ್ಟಣ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಹಲವು ವರ್ಷಗಳಿಂದ ಇದ್ದು ಶಾಸಕರ ಮಾರ್ಗದರ್ಶನದಲ್ಲಿ ಮಳಲಿ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಾಣ ಮಾಡಿದ್ದು, ಪಟ್ಟಣ ವ್ಯಾಪ್ತಿಯಲ್ಲಿ ವಿಪರೀತ ವಾಗಿದ್ದ ಬೀದಿ ನಾಯಿಗಳ ಕಾಟವನ್ನು ಕಡಿಮೆ ಮಾಡಲು ಸಂತಾನ ಹರಣ ಶಸ್ತ್ರಚಿಕಿತ್ಸೆಯನ್ನು ಬೀದಿ ನಾಯಿಗಳಿಗೆ ಮಾಡಲು ಮುಂದಾಗಿದ್ದು, ಪಟ್ಟಣ ವ್ಯಾಪ್ತಿಯಲ್ಲಿ ಫುಟ್ ಪಾತ್ ಒತ್ತುವರಿ ಮಾಡಿದ್ದ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿದ್ದು ಅಲ್ಲದೆ ಹಲವು ಜನಪರ ಕಾರ್ಯಗಳನ್ನು ಪುರಸಭಾ ವ್ಯಾಪ್ತಿಯಲ್ಲಿ ಮಹೇಶ್ವರಪ್ಪ ಮುಂದಾಗಿದ್ದರಿಂದ ರಾಜ್ಯ ಸರ್ಕಾರವು ಅವರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಜಿಲ್ಲಾಧಿಕಾರಿ ಲತಾ ಕುಮಾರಿ ರವರಿಂದ ಮಂಗಳವಾರ ಏಪ್ರಿಲ್ 21 ರಂದು ಹಾಸನದ ಕಲಾ ಭವನದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *