ಸಕಲೇಶಪುರ :ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿರುವುದು ಖಂಡನೀಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನಾ ಮೀಸಲಾತಿಯನ್ನು ವಿರೋಧಿಸಿದ ಕಾಂಗ್ರೆಸ್ ನಿಲುವನ್ನು ವಿರೋಧಿಸಿ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅಂದೇ ಕನಸು ಕಂಡಿದ್ದರು.ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿ ಬೆಳೆಯಬೇಕು ಎಂಬ ಅಂಬೇಡ್ಕರ್ ರವರ ಆಶಯವನ್ನು ಪ್ರಧಾನಿ ನರೇಂದ್ರ ಮೋದಿರವರು ನೆನಸು ಮಾಡಲು ಮುಂದಾಗಿದ್ದು ಆದರೆ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಇದನ್ನು ವಿರೋಧಿಸಿದ್ದರಿಂದ ಮಸೂದೆ ಬಿಲ್ ಗೆ ಸಂಸತ್ತಿನಲ್ಲಿ ಸೋಲಾಯಿತು.

ಹೆಸರಿಗೆ ಮಾತ್ರ ಕಾಂಗ್ರೆಸ್ ಮಹಿಳಾ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತದೆ ಆದರೆ ಮಹಿಳಾ ಮೀಸಲಾತಿ ಬಿಲ್ಲನ್ನು ಕಾಂಗ್ರೆಸ್ ವಿರೋಧಿಸುವ ಮುಖಾಂತರ ಮಹಿಳೆಯರ ವಿರುದ್ಧ ಇರುವುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ದೇಶದ ಮಹಿಳೆಯರು ಇದನ್ನು ಸಹಿಸುವುದಿಲ್ಲ ಮುಂದಿನ ದಿನಗಳಲ್ಲಿ ಮಹಿಳೆಯರೇ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವುದರಲ್ಲಿ ಅನುಮಾನ ಇಲ್ಲ ಎಂದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್ ಮಾತನಾಡಿ, 12ನೇ ಶತಮಾನದಲ್ಲಿಯೇ ಸಮಾಜ ಸುಧಾರಕ ಬಸವಣ್ಣನವರು ಅನುಭವ ಮಂಟಪದ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿ, ಅವರ ಅಭಿಪ್ರಾಯಗಳಿಗೆ ಗೌರವ ನೀಡಿದ ಮಹಾನ್ ದಾರ್ಶನಿಕರಾಗಿದ್ದರು.ಇದೇ ಆದರ್ಶವನ್ನು ಆಧುನಿಕ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿರವರು ಮುಂದುವರಿಸುತ್ತಿದ್ದು, ಮಹಿಳೆಯರ ರಾಜಕೀಯ ಸಬಲೀಕರಣಕ್ಕಾಗಿ ಮಹತ್ವದ ಹೆಜ್ಜೆಗಳನ್ನು ಇಟ್ಟಿ ಸಂಸತ್ತಿನಲ್ಲಿ ಮಹಿಳೆಯರಿಗೆ ಸಮರ್ಪಕ ಪ್ರತಿನಿಧಿತ್ವ ಸಿಗಬೇಕು ಎಂಬ ಉದ್ದೇಶದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿಟ್ಟಿದ್ದು ಆದರೆ ಈ ಮಹತ್ವದ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ್ದು, ಮಹಿಳೆಯರ ರಾಜಕೀಯ ಪ್ರಗತಿಗೆ ಅಡ್ಡಿಯಾಗುವ ನಿಲುವು ತಳೆದಿದೆ ಎಂದು ಆರೋಪಿಸಿದರು.

ಬಿಜೆಪಿ ತಾಲೂಕು ಮಹಿಳಾ ಮುಖಂಡೆ ನೇತ್ರಾ ಸುರೇಶ್ ಮಾತನಾಡಿ ಮಹಿಳೆಯರಿಗೆ ಸಂಸತ್ ಹಾಗೂ ವಿಧಾನಮಂಡಳಿಗಳಲ್ಲಿ ಹೆಚ್ಚಿನ ಪ್ರತಿನಿಧಿತ್ವ ಸಿಗಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ 33 ಶೇಕಡಾ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವ ದಿಟ್ಟ ಹೆಜ್ಜೆ ಇಟ್ಟಿದೆ. ಇದು ದೇಶದ ಮಹಿಳೆಯರಿಗೆ ರಾಜಕೀಯವಾಗಿ ಹೊಸ ದಾರಿ ತೆರೆದ ಐತಿಹಾಸಿಕ ನಿರ್ಧಾರವಾಗಿದೆ.ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಮಹತ್ವವಾದ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಹಾಗೂ ಕೆಲವು ವಿರೋಧ ಪಕ್ಷಗಳು ವಿನಾಕಾರಣ ವಿರೋಧಿಸಿರುವುದು ದುರದೃಷ್ಟಕರಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕೆಲ ಕಾಲ ಹಳೇ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ಮಾಡಿ ಮುಖ್ಯ ರಸ್ತೆಯಲ್ಲಿ ಕೆಲ ನಿಮಿಷ ವಾಹನಗಳನ್ನು ತಡೆದು ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಕ್ಯಾಮನಹಳ್ಳಿ ರಾಜಕುಮಾರ್, ಬಿಜೆಪಿ ತಾಲೂಕು ಕಾರ್ಯದರ್ಶಿ ಅಗ್ನಿ ಸೋಮಶೇಖರ್,ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಬಬಿತಾ ವಿಶ್ವನಾಥ್, ಮಾಜಿ ಪುರಸಭಾ ಸದಸ್ಯೆ ವನಜಾಕ್ಷಿ, ಬಿಜೆಪಿ ಮಹಿಳಾ ಮುಖಂಡರುಗಳಾದ ಪ್ರತಿಭಾ ಮಂಜುನಾಥ್, ಲೋಹಿತ್ ಜಂಬರಡಿ ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *