
ಸಕಲೇಶಪುರ:-ವೈಚಾರಿಕ ಸಂಜೆ ದಿನಪತ್ರಿಕೆ ವತಿಯಿಂದ ದ್ವಿತೀಯ ವರ್ಷದ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಕಲೇಶಪುರ ತಾಲ್ಲೂಕಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರು, ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದವರು ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಹಾಗೂ ಅಗತ್ಯ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಸಾಧನೆಗೆ ಮಾನ್ಯತೆ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:📞 7899533643📞 9353526694
